ಮಂಗಳೂರು – ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತಿಬ್ಬರು ಪೊಲೀಸರ ವಶಕ್ಕೆ – Vishwanews24
ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತಿಬ್ಬರು ಪೊಲೀಸರ ವಶಕ್ಕೆ
ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ನಲ್ಲಿ ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಕೊಲೆಗೆ ಸಹಕಾರ ಕೊಟ್ಟಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಮತ್ತಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಪ್ರವೀಣ್ ಹತ್ಯೆ ನಂತರ ಬೆಂಗಳೂರಿಗೆ ಬಂದು ಆರೋಪಿಗಳು ತಲೆಮರೆಸಿಕೊಂಡಿದ್ದರು. ಈ ಬಗ್ಗೆ ಬೆಂಗಳೂರಿನ ಓರ್ವ ಹಿರಿಯ ಐಪಿಎಸ್ ಅಧಿಕಾರಿಗೆ ಮಾಹಿತಿ ನೀಡಲಾಗಿತ್ತು. ಯಾವುದೇ ಮಾಹಿತಿ ಸೋರಿಕೆಯಾಗದೇ ಖಾಕಿ ತಂಡ ಕಾರ್ಯಾಚರಣೆ ಕೈಗೊಂಡಿತ್ತು. ಸುಳ್ಯ ಪೊಲೀಸರ ಜೊತೆಗೆ ಬೆಂಗಳೂರಲ್ಲಿ ಒಂದು ಟೀಂ ಆರೋಪಿಗಳ ಪತ್ತೆಗೆ ಸಾಥ್ ಕೊಟ್ಟಿತು. ಸದ್ಯ ಬೆಂಗಳೂರಲ್ಲಿ ಇಬ್ಬರನ್ನ ವಶಕ್ಕೆ ಪಡೆದು ಸುಳ್ಯ ಪೊಲೀಸರು ಕರೆದುಕೊಂಡು ಬಂದಿದ್ದಾರೆ.
ಇದನ್ನೂ ಓದಿ : ಜಿಲ್ಲೆಯಲ್ಲಿ ಸರಣಿ ಹತ್ಯೆ ಪ್ರಕರಣ : DGP ಪ್ರವೀಣ್ ಸೂದ್ ಮಂಗಳೂರು ಭೇಟಿ – Vishwanews24
