ಜೀವ ಬೆದರಿಕೆ ಹಿನ್ನೆಲೆ: ಶಸ್ತ್ರಾಸ್ತ್ರ ಪರವಾನಗಿ ಪಡೆದ ಸಲ್ಮಾನ್‌ ಖಾನ್‌ – Vishwanews24

Featured, ರಾಷ್ಟ್ರ ನ್ಯೂಸ್

ಜೀವ ಬೆದರಿಕೆ ಹಿನ್ನೆಲೆ: ಶಸ್ತ್ರಾಸ್ತ್ರ ಪರವಾನಗಿ ಪಡೆದ ಸಲ್ಮಾನ್‌ ಖಾನ್‌

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಸ್ವಯಂ ರಕ್ಷಣೆಗಾಗಿ ಅರ್ಜಿ ಸಲ್ಲಿಸಿದ್ದು, ಇದೀಗ ಅವರಿಗೆ ಶಸ್ತ್ರಾಸ್ತ್ರ ಪರವಾನಗಿಯನ್ನು ನೀಡಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಮೇ 29ರಂದು ಪಂಜಾಬ್‍ನ ಮಾನ್ಸಾ ಬಳಿ ಗಾಯಕ ಸಿಧು ಮೂಸೆ ವಾಲಾ ಅವರನ್ನು ಗುಂಡಿಕ್ಕಿ ಕೊಂದ ಕೆಲವೇ ದಿನಗಳ ನಂತರ ಜೂನ್ ಆರಂಭದಲ್ಲಿ ಸಲ್ಮಾನ್ ಮತ್ತು ಅವರ ತಂದೆಗೆ ಕೊಲೆ ಬೆದರಿಕೆ ಬಂದಿತ್ತು. ಕಳೆದ ತಿಂಗಳು ಸಲ್ಮಾನ್ ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಶಸ್ತ್ರಾಸ್ತ್ರ ಪರವಾನಗಿ ನೀಡುವಂತೆ ಮನವಿ ಮಾಡಿದ್ದರು. ಆಗಿನಿಂದ ಪರವಾನಗಿ ನೀಡಿಕೆ ಪ್ರಾಧಿಕಾರವು ಅಗತ್ಯ ತನಿಖೆಯನ್ನು ಪ್ರಾರಂಭಿಸಿತ್ತು.

ಬೆದರಿಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಟ ಸಲ್ಮಾನ್ ಖಾನ್ ಬುಲೆಟ್ ಫ್ರೂಪ್ ಕಾರ್ ಅನ್ನು ತೆಗೆದುಕೊಂಡಿದ್ದು ಅಲ್ಲದೇ ಅವರು ತಮ್ಮ ಬಾಡಿಗಾರ್ಡ್‌ಗಳ ಸಂಖ್ಯೆಯನ್ನೂ ಹೆಚ್ಚಳ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ಕಟೀಲು ವಾಹನ ಪಾರ್ಕಿಂಗ್ ಶುಲ್ಕ : ತಾತ್ಕಾಲಿಕ ತಡೆ – Vishwanews24 

Leave a Reply