ನವದೆಹಲಿ: ಸರ್ಕಾರಿ ಸೌಲಭ್ಯಗಳ ಪಡೆಯಲು ‘ಆಧಾರ್’ ಬೇಕೋ ಅಥವಾ ಬೇಡವೋ ಎಂಬ ಗೊಂದಲಗಳಿಗೆ ಇಂದು ಸುಪ್ರೀಂಕೋರ್ಟ್ ತೆರೆ ಎಳೆದಿದೆ. ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ, ನ್ಯಾಯಮೂರ್ತಿಗಳಾದ ಎ ಕೆ ಸಿಕ್ರಿ, ಎ.ಎಂ.ಖಾನಿವಿಲ್ಕರ್, ಡಿವೈ ಚಂದ್ರಚೂಡ್, ಅಶೋಕ್‍ಭೂಷಣ್ ಪೀಠ ಆಧಾರ್ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿಹಿಡಿದಿದೆ.
ಆಧಾರ್ ಮೇಲಿನ ದಾಳಿ ಸಂವಿಧಾನದ ಮೇಲೆ ದಾಳಿ ನಡೆಸಿದಂತೆ ಆಗುತ್ತದೆ. ಆಧಾರ್ ವಿಶಿಷ್ಟವಾಗಿರುವುದೇ ಉತ್ತಮವಾಗಿದ್ದು, ಈಗಾಗಲೇ ಆಧಾರ್ ಜನ ಸಾಮನ್ಯ ಬಳಿ ತಲುಪಿದ್ದು, ಅದು ದೇಶದ ಗುರುತಿನ ಪತ್ರವಾಗಿದೆ. ಈಗ ಆಧಾರ್ ವಿರೋಧಿಸಿದರೆ ಕೈಯಲ್ಲಿರುವ ಮಗುವನ್ನ ಎಸೆದಂತೆ. ಆಧಾರ್ ವಿರೋಧಿಸಿದ್ರೆ ಸಂವಿಧಾನ ವಿರೋಧಿಸಿದಂತೆ ಎಂದು ನ್ಯಾಯಪೀಠ ಹೇಳಿದೆ.
ಯಾವುದಕ್ಕೆ ಆಧಾರ್ ಬೇಕು..?
1. ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಡ್ಡಾಯ.
2. ಪ್ಯಾನ್, ಆದಾಯ ತೆರಿಗೆ (ಐಟಿ ರಿಟರ್ನ್ಸ್), ಆಸ್ತಿ ಖರೀದಿಗೆ ಆಧಾರ್ ಕಡ್ಡಾಯ.
3. ಪ್ಯಾನ್ ನಂಬರ್ ಗೆ ಅಧಾರ್ ಕಡ್ಡಾಯವಾಗಿ ಲಿಂಕ್ ಮಾಡಲೇಬೇಕು.
4. ಸರ್ಕಾರಕ್ಕೆ ಸಂಬಂಧಿಸಿದ ಎಲ್ಲ ವ್ಯವಹಾರಗಳಿಗೆ ಆಧಾರ್ ಕಡ್ಡಾಯ ಸಲ್ಲಿಸುವುದು.
ಯಾವುದಕ್ಕೆ ಬೇಡ..?
1. ಖಾಸಗಿ ಸಂಸ್ಥೆಗಳು ಆಧಾರ್ ಕೇಳುವಂತಿಲ್ಲ
2. ಆಧಾರ್ ಮಾಹಿತಿ ಅಥವಾ ದತ್ತಾಂಶವನ್ನು 6 ತಿಂಗಳಕ್ಕೂ ಹೆಚ್ಚಿನ ಕಾಲ ಸಂಗ್ರಹಿಸಿಟ್ಟುಕೊಳ್ಳುವಂತಿಲ್ಲ.
3. ಎಲ್ಲ ಬ್ಯಾಂಕ್‍ಗಳಿಗೆ ಆಧಾರ್ ಮಾಹಿತಿ ಕೊಡುವಂತಿಲ್ಲ.
4. ಸೆಕ್ಷನ್ 7ರ ಪ್ರಕಾರ ಶಾಲೆಗಳ ಪ್ರವೇಶಾತಿ ವೇಳೆ ಆಧಾರ್ ಕೊಡುವ ಅಗತ್ಯವಿಲ್ಲ.
5. ಸಿಬಿಎಸ್‍ಸಿ, ಯುಜಿಸಿ, ನೀಟ್ ಪರೀಕ್ಷೆಗಳಿಗೆ ಆಧಾರ್ ಕಡ್ಡಾಯವಲ್ಲ.
6. ಸಿಮ್ ಖರೀದಿ, ಪೇಟಿಎಂ, ಫೋನ್ ಪೇ ಸೇರಿದಂತೆ ಡಿಜಿಟಲ್ ಪೇಮೆಂಟ್ ಆ್ಯಪ್ ಗಳಿಗೆ ಕಡ್ಡಾಯವಲ್ಲ.
7. ಸೆಕ್ಷನ್ 2(ಬಿ) ಅಕ್ರಮ ವಲಸಿಗರಿಗೆ ಆಧಾರ್ ಕೊಡುವಂತಿಲ್ಲ.
8. ಮೊಬೈಲ್ ಮತ್ತು ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡುವ ಅವಶ್ಯಕತೆಯಿಲ್ಲ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…