ನವದೆಹಲಿ: ಭಾರತ ಮತ್ತು ರಷ್ಯಾ ಸಣ್ಣ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಸಹಕಾರವನ್ನು ಒಳಗೊಂಡ ಹಲವಾರು ಒಪ್ಪಂದಗಳು ಮತ್ತು ಪ್ರೋಟೋಕಾಲ್‌ಗಳಿಗೆ ಸಹಿ ಹಾಕಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ರಷ್ಯಾ ರಕ್ಷಣಾ ಸಚಿವ ಸರ್ಗೆ ಶೋಯಿಗು ಅವರನ್ನು ಭೇಟಿಯಾದ ನಂತರ ತಿಳಿಸಿದ್ದಾರೆ.
“ಭಾರತಕ್ಕೆ ರಷ್ಯಾದ ಬಲವಾದ ಬೆಂಬಲವನ್ನು ಭಾರತ ಶ್ಲಾಘಿಸುತ್ತದೆ. ನಮ್ಮ ಸಹಕಾರವು ಇಡೀ ಪ್ರದೇಶಕ್ಕೆ ಶಾಂತಿ, ಸಮೃದ್ಧಿ ಮತ್ತು ಸ್ಥಿರತೆಯನ್ನು ತರುತ್ತದೆ ಎಂದು ನಾವು ಭಾವಿಸುತ್ತೇವೆ. ಸಣ್ಣ ಶಸ್ತ್ರಾಸ್ತ್ರಗಳು ಮತ್ತು ಮಿಲಿಟರಿ ಸಹಕಾರಕ್ಕೆ ಸಂಬಂಧಿಸಿದಂತೆ ಹಲವಾರು ಒಪ್ಪಂದಗಳು/ ಪ್ರೋಟೋಕಾಲ್‌ಗಳಿಗೆ ಸಹಿ ಹಾಕಿರುವುದು ಸಂತೋಷ ತಂದಿದೆ” ಎಂದು ರಾಜನಾಥ್ ಸಿಂಗ್ ಎಂದು ಟ್ವೀಟ್ ಮಾಡಿದ್ದಾರೆ.
ಶೋಯಿಗು ಅವರೊಂದಿಗಿನ ಮಾತುಕತೆ “ಉತ್ಪಾದಕ, ಫಲಪ್ರದ ಮತ್ತು ಗಣನೀಯ” ಎಂದು ಕರೆದಿರುವ ರಾಜನಾಥ್ ಸಿಂಗ್, “ಭಾರತವು ರಷ್ಯಾದೊಂದಿಗೆ ತನ್ನ ವಿಶೇಷ ಮತ್ತು ವಿಶಿಷ್ಠ ಕಾರ್ಯತಂತ್ರದ ಪಾಲುದಾರಿಕೆಯನ್ನು ಗೌರವಿಸುತ್ತದೆ” ಎಂದು ಹೇಳಿದ್ದಾರೆ.
2021 ರಿಂದ 2031ರ ವರೆಗೆ ಮಿಲಿಟರಿ-ತಾಂತ್ರಿಕ ಸಹಕಾರ ವ್ಯವಸ್ಥೆಯಡಿ ಭಾರತ-ರಷ್ಯಾ ರೈಫಲ್ಸ್ ಪ್ರೈವೇಟ್ ಲಿಮಿಟೆಡ್ ಮೂಲಕ 6,01,427 ಅಸಾಲ್ಟ್ ರೈಫಲ್ಸ್ AK-203 ಖರೀದಿ ಒಪ್ಪಂದಕ್ಕೆ ಭಾರತ ಮತ್ತು ರಷ್ಯಾ ಸಹಿ ಹಾಕಿವೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…