ಬೆಂಗಳೂರು(ನ. 19): ಕೋವಿಡ್ ಸವಾಲಿನ ನಡುವೆ ಇದೇ ಮೊದಲ ಬಾರಿಗೆ ವರ್ಚ್ಯುಯಲ್ ಆಗಿ ನಡೆಯಲಿರುವ ಭಾರತದ ಮಹತ್ವದ ತಾಂತ್ರಿಕ ಕಾರ್ಯಕ್ರಮವಾದ “ಬೆಂಗಳೂರು ತಂತ್ರಜ್ಞಾನ ಮೇಳ-2020 (ಬಿಟಿಎಸ್-2020)” ಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇಂದು ಬೆಳಿಗ್ಗೆ 11ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೂರು ದಿನಗಳ ಈ ಮೇಳವನ್ನು ಜನೋಪಯೋಗಕ್ಕೆ ತಂತ್ರಜ್ಞಾನ ಬಳಸುವ ಬಗ್ಗೆ ಪ್ರಧಾನಿ ಮೋದಿ ಸ್ವತಃ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಮತ್ತು ಸ್ವಿಸ್ ಗಣರಾಜ್ಯದ ಉಪರಾಷ್ಟ್ರಾಧ್ಯಕ್ಷ ಗೈ ಪರ್ಮೆಲಿನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ ಸಂವಹನ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು ಆನ್ ಲೈನ್ ಮೂಲಕ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಐಟಿ/ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಸಚಿವ ಜಗದೀಶ್ ಶೆಟ್ಟರ್ ಸಮಾರಂಭದಲ್ಲಿ ಹಾಜರಿರಲಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…