Bangalore Tech Summit: ಬೆಂಗಳೂರು ತಂತ್ರಜ್ಞಾನ ಮೇಳಕ್ಕೆ ಇಂದು ಪ್ರಧಾನಿ ಮೋದಿ ಚಾಲನೆ; ವಿಡಿಯೋ ಕಾನ್ಫರೆನ್ಸ್​ ಮೂಲಕ ಉದ್ಘಾಟನೆ​

ಬೆಂಗಳೂರು(ನ. 19): ಕೋವಿಡ್ ಸವಾಲಿನ ನಡುವೆ ಇದೇ ಮೊದಲ ಬಾರಿಗೆ ವರ್ಚ್ಯುಯಲ್ ಆಗಿ ನಡೆಯಲಿರುವ ಭಾರತದ ಮಹತ್ವದ ತಾಂತ್ರಿಕ ಕಾರ್ಯಕ್ರಮವಾದ “ಬೆಂಗಳೂರು ತಂತ್ರಜ್ಞಾನ ಮೇಳ-2020 (ಬಿಟಿಎಸ್-2020)” ಕ್ಕಾಗಿ  ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇಂದು ಬೆಳಿಗ್ಗೆ 11ಗಂಟೆಗೆ ವಿಡಿಯೋ ಕಾನ್ಫರೆನ್ಸ್​​ ಮೂಲಕ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೂರು ದಿನಗಳ ಈ ಮೇಳವನ್ನು  ಜನೋಪಯೋಗಕ್ಕೆ ತಂತ್ರಜ್ಞಾನ ಬಳಸುವ ಬಗ್ಗೆ ಪ್ರಧಾನಿ ಮೋದಿ ಸ್ವತಃ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ.  ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಮತ್ತು ಸ್ವಿಸ್​ ಗಣರಾಜ್ಯದ ಉಪರಾಷ್ಟ್ರಾಧ್ಯಕ್ಷ ಗೈ ಪರ್ಮೆಲಿನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ ಸಂವಹನ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು ಆನ್ ಲೈನ್ ಮೂಲಕ ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಐಟಿ/ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಸಚಿವ ಜಗದೀಶ್ ಶೆಟ್ಟರ್ ಸಮಾರಂಭದಲ್ಲಿ ಹಾಜರಿರಲಿದ್ದಾರೆ.

modi
Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

15 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

16 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

17 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

17 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

18 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

18 hours ago