Featured

BIG BREAKING NEWS ಡಿಸೆಂಬರ್ 27 ಕಾಪು ಪುರಸಭಾ ಚುನಾವಣೆ ದಿನಾಂಕ ಘೋಷಣೆ : vishwanews24

BIG BREAKING NEWS ಡಿಸೆಂಬರ್ 27 ಕಾಪು ಪುರಸಭಾ ಚುನಾವಣೆ ದಿನಾಂಕ ಘೋಷಣೆ : vishwanews24

ಕಾಪು: ಸದ್ಯ ರಾಜ್ಯದಲ್ಲಿ ವಿಧಾನಪರಿಷತ್‌ ಚುನಾವಣೆ (MLC Election) ಕಾವು ರಂಗೇರಿದೆ. ಇದರ ಮಧ್ಯೆ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಗೆ ಚುನಾವಣೆ ದಿನಾಂಕ
ಘೋಷಣೆಯಾಗಿದೆ.

ಅವಧಿ ಮುಕ್ತಾಯಗೊಂಡ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ (Local Body Elections) ದಿನಾಂಕವನ್ನು ರಾಜ್ಯ ಆಯೋಗ ಚುನಾವಣೆ (Karnataka Election Commission) ಘೋಷಣೆ ಮಾಡಿದೆ. 4 ನಗರಸಭೆ, 19 ಪುರಸಭೆ, 35 ಪ.ಪಂ.ಗೆ ಡಿ. 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಹೊರಬೀಳಲಿದೆ.

ಡಿಸೆಂಬರ್ 27ರಂದು ಚಿಕ್ಕಮಗಳೂರು, ಶಿರಾ, ಗದಗ-ಬೆಟಗೇರಿ, ಹೊಸಪೇಟೆ-ಹೆಬ್ಬಗೋಡಿ ನಗರಸಭೆಗಳಿಗೆ ಮತದಾನ ನಡೆಯಲಿದೆ. 5 ನಗರಸಭೆ, 3 ಪುರಸಭೆ, 1 ಪಟ್ಟಣ ಪಂಚಾಯಿತಿಯಲ್ಲಿ ತೆರವಾಗಿರುವ ಸ್ಥಾನಗಳಿಗೂ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ. ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ತೆರವಾಗಿರುವ 386 ಸ್ಥಾನಗಳಿಗೂ ಉಪಚುನಾವಣೆ ನಡೆಯಲಿದೆ.  ಡಿಸೆಂಬರ್ 13 ರಿಂದ ನೀತಿಸಂಹಿತೆ ಜಾರಿಯಾಗಲಿದೆ.

ಕೋವಿಡ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಮಾವಳಿಗಳನ್ನು ಪಾಲನೆ ಮಾಡಿ ಚುನಾವಣೆ ಪ್ರಕ್ರಿಯೆ ನಡೆಸುವಂತೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ಡಿಸೆಂಬರ್ 27ರಂದು ಅಥಣಿ, ಅಣ್ಣಿಗೇರಿ, ಬಂಕಾಪುರ, ಜಿಗಣಿ, ಚಂದಾಪುರ, ಬಿಡದಿ, ಮಲೆಬೆನ್ನೂರು, ಕಾಪು, ಹಾರೋಗೇರಿ, ಮುಗಳಖೋಡ, ಮುನವಳ್ಳಿ, ಉಗಾರಖುರ್ದ, ಕಾರಟಗಿ, ಕುರೆಕುಪ್ಪ, ಕುರುಗೋಡು, ಹಗರಿಬೊಮ್ಮನಹಳ್ಳಿ, ಮಸ್ಕಿ, ಕೆಂಭಾವಿ, ಕಕ್ಕೇರಾ ಪುರಸಭೆಗಳಿಗೆ ಮತದಾನ ನಡೆಯಲಿದೆ. ಡಿ. 27ರಂದು 35 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.

ಅವು ನಾಯಕನಹಟ್ಟಿ, ವಿಟ್ಲ, ಕೋಟೆಕಾರು, ಎಂ.ಕೆ.ಹುಬ್ಬಳ್ಳಿ, ಕಂಕನವಾಡಿ, ನಾಗನೂರ, ಯಕ್ಸಾಂಬಾ, ಕಿತ್ತೂರು, ಅರಭಾವಿ, ಐನಾಪುರ, ಶೇಡಬಾಳ, ಚಿಂಚಿಲಿ, ಬೋರಗಾಂವ್, ಕಲ್ಲೋಳಿ, ನಲತವಾಡ, ನಿಡಗುಂದಿ, ದೇವರಹಿಪ್ಪರಗಿ, ಅಲಮೇಲ, ಮನಗೂಳಿ, ಕೊಲ್ಹಾರ, ಕಮತಗಿ, ಬೆಳಗಲಿ, ಅಮೀನಗಡ, ಗುತ್ತಲ, ಜಾಲಿ, ತಾವರಗೇರಾ, ಕುಕನೂರ, ಭಾಗ್ಯನಗರ, ಕನಕಗಿರಿ, ಮರಿಯಮ್ಮನಹಳ್ಳಿ, ಕವಿತಾಳ, ತುರವಿಹಾಳ, ಬಳಗಾನೂರು, ಸಿರವಾರ ಪಟ್ಟಣ ಪಂಚಾಯಿತಿಗೆ ಮತದಾನ ನಡೆಯಲಿದೆ.  ಸ್ಥಳೀಯ ಸಂಸ್ಥೆ ಚುನಾವಣೆ ದಿನಾಂಕಡಿಸೆಂಬರ್ 13 ಚುನಾವಣಾ ಅಧಿಸೂಚನೆಡಿಸೆಂಬರ್ 17 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಡಿಸೆಂಬರ್ 27 ಮತದಾನಡಿಸೆಂಬರ್ 30 ಫಲಿತಾಂಶ ಬರಲಿದೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

16 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

16 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

16 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

16 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 days ago