BIG BREAKING NEWS – ರಾತ್ರಿ ಕರ್ಫ್ಯೂ ರದ್ದುಗೊಳಿಸಿದ ರಾಜ್ಯಸರ್ಕಾರ

Featured, ರಾಜ್ಯ ನ್ಯೂಸ್

ಬೆಂಗಳೂರು: ಬ್ರಿಟನ್ ನಲ್ಲಿ ರೂಪಾಂತರ ಹೊಂದಿದ ನೂತನ ಕೋವಿಡ್ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಡಿಸೆಂಬರ್ 24ರಿಂದ 9 ದಿನಗಳ ಕಾಲ ರಾಜ್ಯಾದ್ಯಂತ ಹೇರಿದ್ದ ರಾತ್ರಿ ಕರ್ಫ್ಯೂವನ್ನು ಜಾರಿಯಾಗುವ ಮೊದಲೇ ದಿಢೀರ್ ಆಗಿ ವಾಪಸ್ ಪಡೆದಿದೆ.

ಡಿಸೆಂಬರ್ 24ರ ರಾತ್ರಿ 11ಗಂಟೆಯಿಂದ ಬೆಳಗ್ಗೆ 5ಗಂಟೆವರೆಗೆ 9 ದಿನಗಳ ಕಾಲ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ರಾಜ್ಯ ಸರ್ಕಾರ ಬುಧವಾರ(ಡಿಸೆಂಬರ್ 23) ಆದೇಶ ಹೊರಡಿಸಿತ್ತು. ಆದರೆ ರಾತ್ರಿ ಕರ್ಫ್ಯೂಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ವಾಪಸ್ ಪಡೆದಿದೆ ಎಂದು ವರದಿ ತಿಳಿಸಿದೆ.