ಬೆಂಗಳೂರು: ಚುನಾವಣೆ ಬರುತ್ತಿದೆ ಅಂತಾ ಬಿಜೆಪಿ ಅವರು ತರಾತುರಿಯಲ್ಲಿ ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆಯನ್ನ ವಿಧಾನಸೌಧದಲ್ಲಿ ನಿರ್ಮಾಣ ಮಾಡ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದರು.
ಪ್ರತಿಮೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಸಚಿವರಿಂದ ಶಂಕುಸ್ಥಾಪನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವರು ಸ್ವಂತ ಆಸ್ತಿಯಿಂದ ಪ್ರತಿಮೆ ಮಾಡಲಿ, ಒಳ್ಳೆ ಕೆಲಸ ಮಾಡಲಿ. ಚುನಾವಣೆ ಬಂತು ಅಂತ ತರಾತುರಿಯಲ್ಲಿ ಪ್ರತಿಮೆ ನಿರ್ಮಾಣ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕೆಂಪೇಗೌಡರು ಬೆಂಗಳೂರು ಕಟ್ಟಿದ್ದಾರೆ. ಬಸವಣ್ಣನವರು ನಾಡಿಗೆ ಒಳ್ಳೆ ಸಂಸ್ಕೃತಿ ಕಲಿಸಿಕೊಟ್ಟಿದ್ದಾರೆ. ಸರ್ಕಾರದ ಇಚ್ಚೆಯಂತೆ ಪ್ರತಿಮೆ ಮಾಡಲಿ. ಬಿಜೆಪಿ ಅವರು ಪ್ರತಿಮೆ ಮಾಡಲು ಬಹಳ ಅರ್ಜೆಂಟಾಗಿ ಇದ್ದಾರೆ ಅಂತ ಲೇವಡಿ ಮಾಡಿದರು.
ಬಿಜೆಪಿ ಅವರು ಆತುರವಾಗಿ ಎರಡು ತಿಂಗಳಲ್ಲಿ ಸ್ಥಾಪನೆ ಮಾಡ್ತೀವಿ ಅಂತಿದ್ದಾರೆ. ಬಿಜೆಪಿ ಅವರಿಗೆ ಗೊತ್ತಾಗಿದೆ ಎರಡು ತಿಂಗಳು ಮಾತ್ರ ಅವರ ಸರ್ಕಾರ ಇರೋದು ಅಂತ. ಹೀಗಾಗಿ ಪ್ರತಿಮೆ ಮಾಡಲು ಮುಂದಾಗ್ತಿದ್ದಾರೆ. ಬಿಜೆಪಿ ಅವರಿಗೆ ಶುಭವಾಗಲಿ ಅಂತ ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.
Join our Whatsapp group by clicking the below link 👇👇
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …