BREAKING – ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ʻಮಲ್ಲಿಕಾರ್ಜುನ ಖರ್ಗೆʼ ಆಯ್ಕೆ – Vishwanews24
BREAKING – ಕಾಂಗ್ರೆಸ್ʼ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಪ್ರಕಟ : ನೂತನ ಅಧ್ಯಕ್ಷರಾಗಿ ʻಮಲ್ಲಿಕಾರ್ಜುನ ಖರ್ಗೆʼ ಆಯ್ಕೆ
ನವದೆಹಲಿ: ಕಾಂಗ್ರೆಸ್‌ಗೆ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕೇಂದ್ರದ ಮಾಜಿ ಸಚಿವರಾದ ಮಲ್ಲಿಕಾರ್ಜುನ ಖರ್ಗೆಅವರು ಗೆದ್ದಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಅಕ್ಟೋಬರ್ 17 ಅಂದ್ರೆ, ಸೋಮವಾರ ಮತದಾನ ನಡೆದಿತ್ತು. ಇಂದು ಮತಎಣಿಕೆ ನಡೆದಿದ್ದು, ಅದರ ಫಲಿತಾಂಶ ಪ್ರಕಟವಾಗಿದೆ.
ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಗೆದ್ದಿದ್ದು, ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 7,897 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿಯಾದ ಶಶಿ ತರೂರ್ ಅವರಿಗೆ ಕೇವಲ 1072 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.
