BREAKING : ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತ : ವಿದ್ಯಾರ್ಥಿನಿ ಸಾವು – VIshwanews24

Featured, ರಾಜ್ಯ ನ್ಯೂಸ್

BREAKING : ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತ: ವಿದ್ಯಾರ್ಥಿನಿ ಸಾವು 

ಮೈಸೂರು:ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ವಿದ್ಯಾರ್ಥಿನಿ ಅನುಶ್ರಿ, ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯೋದಕ್ಕಾಗಿ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಳು.

ನಿಗದಿತ ಸಮಯದಂತೆ ಆರಂಭಗೊಂಡಂತ ಪರೀಕ್ಷೆಯಲ್ಲಿ ಪರೀಕ್ಷೆ ಬರೆಯುತ್ತಿದ್ದಂತ ಸಂದರ್ಭದಲ್ಲಿ, ಅನುಶ್ರೀ ಹೃದಯಾಘಾತಕ್ಕೆ ಒಳಗಾಗಿದ್ದಾಳೆ. ಕೂಡಲೇ ಆಕೆಯನ್ನು ತಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆದ್ರೇ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಅನುಶ್ರೀ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

ಬಾಗಲಕೋಟೆ : ಹಿಜಬ್ ತೆಗೆಯಲು ನಿರಾಕರಿಸಿ ಮನೆಗೆ ಹಿಂದಿರುಗಿದ ವಿದ್ಯಾರ್ಥಿನಿ – Vishwanews24

Leave a Reply