Featured

Breaking : ನಿರೂಪಕಿ ಅನುಶ್ರೀ ವಿರುದ್ಧ ನಾನು ಹೇಳಿಕೆ ಕೊಟ್ಟಿದ್ದೇನೆ ಎಂಬುದು ಸುಳ್ಳು : ಕಿಶೋರ್ ಅಮನ್ ಶೆಟ್ಟಿ ಹೇಳಿಕೆ -Vishwanews24

ನಿರೂಪಕಿ ಅನುಶ್ರೀ ವಿರುದ್ಧ ನಾನು ಹೇಳಿಕೆ ಕೊಟ್ಟಿದ್ದೇನೆ ಎಂಬುದು ಸುಳ್ಳು..

ನನಗೂ ಅನುಶ್ರೀಗೂ ಯಾವುದೇ ರೀತಿಯ ಸಂಪರ್ಕ ಇಲ್ಲ..

ಅನುಶ್ರೀ ತುಂಬಾ ಕಷ್ಟಪಟ್ಟು ಮೇಲೆ ಬಂದಿದ್ದಾರೆ. ಅವರಿಗೆ ತುಂಬಾ ಗೌರವ ಕೊಡುತ್ತೇವೆ..

ಕಿಶೋರ್ ಅಮನ್ ಶೆಟ್ಟಿ ಹೇಳಿಕೆ.

ಮಂಗಳೂರು: ನಿರೂಪಕಿ ಅನುಶ್ರೀ ವಿರುದ್ಧ ನಾನು ಹೇಳಿಕೆ ಕೊಟ್ಟಿದ್ದೇನೆ ಎಂಬುದು ಸುಳ್ಳು. ಅವರ ವಿರುದ್ಧ ನಾನು ಈ ರೀತಿಯ ಹೇಳಿಕೆ ನೀಡಿಲ್ಲ. ಇದು ಸುಳ್ಳು ಆರೋಪ ಎಂದು ಡ್ರಗ್ಸ್ ಆರೋಪ ಎದುರಿಸುತ್ತಿರುವ ಕಿಶೋರ್ ಅಮನ್ ಶೆಟ್ಟಿ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ  ಮಾತನಾಡಿದ ಕಿಶೋರ್ ಅಮನ್ ಶೆಟ್ಟಿ, ನನಗೂ ಅನುಶ್ರೀಗೂ ಯಾವುದೇ ರೀತಿಯ ಸಂಪರ್ಕ ಇಲ್ಲ. ಕುಣಿಯೋಣ ಬಾರಾ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಪರಿಚಯ ಆಗಿದೆ. 2009ರಲ್ಲಿ ಡ್ಯಾನ್ಸ್ ಗೆ ಕೊರಿಯೋಗ್ರಾಫ್ ಮಾಡಿದ್ದೇ ಅದೇ ಮೊದಲು ಮತ್ತು ಕೊನೆ. ಬಳಿಕ 4-5 ವರ್ಷಗಳ ಹಿಂದೆ ಮಂಗಳೂರಲ್ಲಿ ನಡೆದ ಡ್ಯಾನ್ಸ್ ಕ್ಲಾಸ್ ಕಾರ್ಯಕ್ರಮದಲ್ಲಿ ನಾವು ಭೇಟಿಯಾಗಿದ್ದೆವು. ಬಳಿಕ ನಾವಿಬ್ಬರು ಎಲ್ಲೂ ಭೇಟಿಯಾಗಿಲ್ಲ, ಫೋನ್ ಸಂಪರ್ಕವೂ ಇಲ್ಲ. ಅವರ ಫೋನ್ ನಂಬರ್ ಕೂಡ ನನ್ನ ಬಳಿ ಇಲ್ಲ. ಇದೆಲ್ಲವೂ ಸುಳ್ಳು ಆರೋಪ ಎಂದರು.

ಖಾಸಗಿ ವಾಹಿನಿಯ ಶೋ ಒಂದರ ಫೈನಲ್‍ನಲ್ಲಿ ಕೊರಿಯೋಗ್ರಾಫ್ ಮಾಡಿದ್ದೆ ನಾನು. ಆ ಬಳಿಕ ಯಾವುದೇ ಸಂಪರ್ಕವಿಲ್ಲ. ಎಲ್ಲವೂ ಸುಳ್ಳು ಸುದ್ದಿಗಳು, ಅನುಶ್ರೀ ವಿರುದ್ಧ ನಾನು ಹೇಳಿಕೆ ನೀಡಿದ್ದೇನೆ ಎಂಬುದು ಸುಳ್ಳು. ಪೆಡ್ಲಿಂಗ್ ಮಾಡಲು ಹೋಗಿಲ್ಲ. ಯಾಕಂದ್ರೆ ನಮ್ಮ ವೃತ್ತಿಯೇ ಬೇರೆ. ಜಾರ್ಜ್ ಶೀಟ್‍ನಲ್ಲಿ ಸುಳ್ಳು ಹೇಳಿಕೆ ಹಾಕಲಾಗಿದೆ. ಪಾರ್ಟಿ ಬಿಡಿ ನಾವು ರಿಹರ್ಸಲ್ ಮಾಡಿ ಬರೋದೇ ಲೇಟ್ ನೈಟ್ ಅಂತ್ರದಲ್ಲಿ ಇದೆಲ್ಲ ಮಾಡಲು ಸಾಧ್ಯವೇ ಎಂದು ಕಿಶೋರ್ ಹೇಳಿದರು.

ಅನುಶ್ರೀ ಬಗ್ಗೆ ಇಂತಹ ಹೇಳಿಕೆಗಳನ್ನು ನಾನು ಕೊಡಲೇ ಇಲ್ಲ. ಅನುಶ್ರೀ ತುಂಬಾ ಕಷ್ಟಪಟ್ಟು ಮೇಲೆ ಬಂದಿದ್ದಾರೆ. ಅವರಿಗೆ ತುಂಬಾ ಗೌರವ ಕೊಡುತ್ತೇವೆ. ನಾನು ಅವರಿಗೆ ಬರೀ ಕೊರಿಯೋಗ್ರಾಫ್ ಮಾತ್ರ ಮಾಡಿದ್ದೇನೆ ಇದು ಕಿಶೋರ್ ಹೇಳುತ್ತಿರುವ ಪಕ್ಕಾ ಮಾಹಿತಿ ಎಂದರು

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 days ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 days ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 days ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago