Featured

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಕೇರಳದಲ್ಲಿ ಮೂರನೇ ವ್ಯಕ್ತಿ ಪೊಲೀಸ್ ವಶಕ್ಕೆ – Vishwanews24

BREAKING – ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಮತ್ತೊಬ್ಬ ಶಂಕಿತ ಆರೋಪಿ ಪೊಲೀಸ್ ವಶಕ್ಕೆ – Vishwanews24

ಬೆಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ಬಂಧಿಸಲಾಗಿದೆ.  ಕೇರಳದ ಕಣ್ಣೂರಿನ ತಲಸೇರಿಯಲ್ಲಿ ಓರ್ವ ವ್ಯಕ್ತಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದು,  ಪ್ರವೀಣ್ ಹತ್ಯೆಯಲ್ಲಿ ಭಾಗಿಯಾಗಿರುವ ಅನುಮಾನದ ಮೇಲೆ ವಶಕ್ಕೆ ಪಡೆಯಲಾಗಿದೆ.  ಶಂಕಿತ ವ್ಯಕ್ತಿ ತಲಸೇರಿಯಲ್ಲಿ ಚಿಕಿನ್ ಸೆಂಟರ್ ಅಂಗಡಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಸದ್ಯ ಶಂಕಿತ ವ್ಯಕ್ತಿಯನ್ನು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಸಂಬಂಧಿಸಿ ಈಗಾಗಲೇ  ಝಾಕಿರ್ ಮತ್ತು ಶಫೀಕ್ ಎಂಬವರನ್ನು ಬಂಧಿಸಲಾಗಿದ್ದು, ಕೇರಳ ನಂಟು ಹೊಂದಿರುವ ಬಗ್ಗೆ ವಿಚಾರಣೆ ನಡೆಸಲಾಗಿತ್ತು.  ಈವರೆಗೆ ಮೂರು ಜನರ ಬಂಧನವಾದಂತಾಗಿದೆ. ಇನ್ನು ಬಂಧಿತ ಝಾಕಿರ್ ಮತ್ತು ಶಫೀಕ್  ಅವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಹಂತಕರನ್ನು ಪೊಲೀಸ್ ಕಸ್ಟಡಿಗೆ ವಹಿಸಿದೆ. ಇನ್ನು ಹತ್ಯೆ ಪ್ರಕರಣವನ್ನು ಸರಕಾರ ಮತ್ತು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, 20 ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆ ನಡೆಸಲಾಗಿದೆ. ಜೊತೆಗೆ ಬೆಳ್ಳಾರೆ ಸಮೀಪದಲ್ಲರುವ ಎಲ್ಲಾ ಸಿಸಿಟಿವಿಗಳನ್ನು ಪರಿಶೀಲನೆ  ನಡೆಸಿ ಶಂಕಿತರ ಚಲನವಲನಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

7 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

8 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

8 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

8 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

8 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago