BREAKING – ಮೇ 19 ರಂದು SSLC ಫಲಿತಾಂಶ ಪ್ರಕಟ – Vishwnews24

Featured, ರಾಜ್ಯ ನ್ಯೂಸ್

ಮೇ 19 ರಂದು SSLC ಫಲಿತಾಂಶ ಪ್ರಕಟ

ಬೆಂಗಳೂರು: ಮೇ 19 ರಂದು ಎಸ್‌ಎಸ್‌ಎಲ್‌ಸಿ(SSLC) ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.

ಶಿಕ್ಷಣ ಸಚಿವರ ಸುದ್ದಿಗೋಷ್ಠಿ ಬಳಿಕ ಎಸ್ಎಸ್ಎಲ್‌ಸಿ ಬೋರ್ಡ್ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮರು ದಿನ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಮಾರ್ಚ್‌ 28 ರಿಂದ ಏಪ್ರಿಲ್ 11 ರವರೆಗೆ ಪರೀಕ್ಷೆ ನಡೆದಿತ್ತು. ಸುಮಾರು 8.73 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಮೂರು ದಿನದ ಹಿಂದೆ ಮಾತನಾಡಿದ್ದ ಸಚಿವ ನಾಗೇಶ್‌, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಮೇ ಮೂರನೇ ವಾರ ಪ್ರಕಟ ಮಾಡಲಾಗುತ್ತದೆ ಎಂದು ತಿಳಿಸಿದ್ದರು.

ನಿರ್ಮಲಾ ಸೀತಾರಾಮನ್ ಮೇ.14 ರಂದು ಉಡುಪಿಗೆ – Vishwanews24

Leave a Reply