BREAKING _ ಮಂಗಳೂರು : ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ : ಇಬ್ಬರು ಆರೋಪಿಗಳ ಬಂಧನ – Vishwanews24
BREAKING _ ಮಂಗಳೂರು : ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ : ಇಬ್ಬರು ಆರೋಪಿಗಳ ಬಂಧನ
ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಶಫೀಕ್ ಬೆಳ್ಳಾರೆ ಹಾಗೂ ಝಾಕಿರ್ ಸವಣೂರು ಎಂದು ಗುರುತಿಸಲಾಗಿದ್ದು, ಇನ್ನೊಬ್ಬ ಆರೋಪಿಯೂ ಪೋಲಿಸ್ ವಶದಲ್ಲಿದ್ದು ಆತನ ಬಂಧನ ಖಚಿತವಾಗಿಲ್ಲ.
ಸಿಸಿಟಿವಿ ಹೇಳಿದ ಸಾಕ್ಷ್ಯ
ಪ್ರವೀಣ್ ಹತ್ಯೆಯ ಬಳಿಕ ಮಾಹಿತಿ ಕಲೆ ಹಾಕಿದ ಪೋಲಿಸರಿಗೆ 40 ನಿಮಿಷ ಕಾದು ರಕ್ತದೋಕುಳಿ ಹರಿಸಿರುವ ಕಿಲ್ಲರ್ಸ್ ಗಳ ಸಿಸಿಟಿವಿ ದೃಶ್ಯ ಸಿಕ್ಕಿತ್ತು. ಕೊಲೆಗೂ ಮೊದಲು ಅದೊಂದು ಜಾಗದಲ್ಲೇ ಹಂತಕರು ಟೆಂಟ್ ಹಾಕಿದ್ದು, ಸಿಸಿಟಿವಿಯಲ್ಲಿ ಹಂತಕರ ಹೆಜ್ಜೆಗುರುತು ಸೆರೆಯಾಗಿತ್ತು.
ಪ್ರವೀಣ್ ಕೊಲೆಗೂ ಮೊದಲು ಹಂತಕರು ಭಯಾನಕ ಸಂಚು ರೂಪಿಸಿದ್ದು, ಪ್ರವೀಣ್ ಚಿಕನ್ ಅಂಗಡಿಯಿಂದ 50 ಮೀ. ದೂರದಲ್ಲಿ 40 ನಿಮಿಷದವರೆಗೂ ಒಂದೇ ಜಾಗದಲ್ಲಿ ಬೈಕ್ ನಿಲ್ಲಿಸಿದ್ದರು. ರಾತ್ರಿ 8 ಗಂಟೆ 1 ನಿಮಿಷ 51 ಸೆಕೆಂಡ್ಗೆ ಎಂಟ್ರಿ ಕೊಟ್ಟಿದ್ದು, 8 ಗಂಟೆ 1 ನಿಮಿಷ 57 ಸೆಕೆಂಡ್ಗೆ 50 ಮೀ. ದೂರದಲ್ಲಿ ಸ್ಟಾಪ್ ಮಾಡಿದ್ದರು. 8 ಗಂಟೆ 33 ನಿಮಿಷಕ್ಕೆ ಚಿಕನ್ ಅಂಗಡಿ ಮುಂದೆ ಹೋಗಿ ಮತ್ತೆ ಮೊದಲಿದ್ದ ಅದೇ ಜಾಗದಲ್ಲಿ ಸ್ಟಾಪ್ ಆಗಿದ್ದರು.
8 ಗಂಟೆ 38 ನಿಮಿಷಕ್ಕೆ ಮತ್ತೆ ಅಂಗಡಿ ದಿಕ್ಕಿನತ್ತ ಹಂತಕರು ಸಾಗಿದ್ದು, 8.38 ರಿಂದ 8.40 ರ ಸಮಯದಲ್ಲಿ ಹತ್ಯೆ ನಡೆದಿರುವ ಸಾಧ್ಯತೆಯಿದ್ದು, 8 ಗಂಟೆ 40 ನಿಮಿಷಕ್ಕೆ ಅಂಗಡಿಯತ್ತ ಜನ ಓಡೋಡಿ ಬಂದಿದ್ದಾರೆ. ಈ ವೇಳೆ ಹಂತಕರು ಪರಾರಿಯಾಗಿದ್ದರು.
