Featured

BREAKING _ ಸುರತ್ಕಲ್ ಟೋಲ್‍ಗೇಟ್ ವಿವಾದ : ಹೋರಾಟಗಾರರ ಮೇಲೆ FIR ದಾಖಲು – Vishwanews24

BREAKING _ ಸುರತ್ಕಲ್ ಟೋಲ್‍ಗೇಟ್ ವಿವಾದ : ಹೋರಾಟಗಾರರ ಮೇಲೆ FIR ದಾಖಲು

ಮಂಗಳೂರು: ಸುರತ್ಕಲ್ ಟೋಲ್‍ಗೇಟ್ ವಿವಾದ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಟೋಲ್‌ ಗೇಟ್‌ ಕಿತ್ತೆಸೆಯಲು ಯತ್ನಿಸಿದ ಹಿನ್ನೆಲೆಯಲ್ಲಿ ಹೋರಾಟಗಾರರ ಮೇಲೆ ಎಫ್‍ಐಆರ್ ದಾಖಲಾಗಿದೆ.

ಹೀಗಾಗಿ ಟೋಲ್ ಸಂಗ್ರಹ ನಿಲ್ಲುವವರೆಗೂ ರಾತ್ರಿ- ಹಗಲು ಅನಿರ್ದಿಷ್ಟ ಧರಣಿಗೆ ನಿರ್ಧರಿಸಿದ್ದಾರೆ. ಅ.18 ರಂದು ಮಂಗಳೂರಿನ ಸುರತ್ಕಲ್ ಟೋಲ್‍ಗೇಟ್ ಬಳಿ ಭಾರೀ ಹೈಡ್ರಾಮಾವೇ ನಡೆದಿತ್ತು. ಸುರತ್ಕಲ್ ಟೋಲ್‍ಗೇಟ್ ಅಕ್ರಮ ಎಂದು ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಹೋರಾಟ ಉಗ್ರ ಸ್ವರೂಪ ಪಡೆದಿತ್ತು. ಪೊಲೀಸರು ಹಾಕಿದ್ದ ತಡೆಬೇಲಿ ಮುರಿದು ಟೋಲ್‍ಗೇಟ್‍ನತ್ತ ನುಗ್ಗಿದ್ದ ಹೋರಾಟಗಾರರು, ಹೈಡ್ರಾಮಾ ನಡೆಸಿದ್ದು, ಬಳಿಕ ಪೊಲೀಸರು ನೂರಾರು ಹೋರಾಟಗಾರರನ್ನು ಬಂಧಿಸಿ, ಬಿಡುಗಡೆಗೊಳಿಸಿದ್ರು. ಆದರೆ ಇದೀಗ ಟೋಲ್‍ಗೇಟ್‍ನ ಗುತ್ತಿಗೆದಾರ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ನೀಡಿದ ದೂರಿನಂತೆ ಹೋರಾಟಗಾರರ ಮೇಲೆ ಎರಡು ಎಫ್‍ಐಆರ್ ದಾಖಲಾಗಿದೆ.

ಮಂಗಳೂರು: ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಪ್ರಕರಣ.. ಪೊಲೀಸ್‌ ಕಾನ್‌ಸ್ಟೆಬಲ್‌ ಪ್ರವೀಣ್‌ ಸಾಲ್ಯಾನ್‌ಗೆ ಜೀವಾವಧಿ ಶಿಕ್ಷೆ – Vishwanews24

ಟೋಲ್‍ಗೇಟನ್ನು ನ.7ರೊಳಗಾಗಿ ಸ್ಥಗಿತಗೊಳಿಸುವ ಭರವಸೆಯನ್ನು ಜಿಲ್ಲಾಡಳಿತ ನೀಡಿದೆ. ಆದರೆ ಇಂತಹ ದಿನಾಂಕಗಳು ಕಳೆದ ಆರು ವರ್ಷದಿಂದ ಆಗಿರೋದ್ರಿಂದ ಇದರ ಬಗ್ಗೆ ನಂಬಿಕೆ ಇಲ್ಲ. ಹೀಗಾಗಿ ಹೋರಾಟ ಸಮಿತಿ ಸಭೆ ಸೇರಿ ಮುಂದಿನ ಹೋರಾಟದ ಭಾಗವಾಗಿ ಅಕ್ಟೋಬರ್ 28 ರಿಂದ ಟೋಲ್‍ಗೇಟ್ ಮುಂಭಾಗದಲ್ಲಿ ರಾತ್ರಿ ಹಗಲು ಅನಿರ್ದಿಷ್ಟ ಧರಣಿ ನಡೆಸಲು ನಿರ್ಧರಿಸಲಾಗಿದೆ.

ಮಲ್ಪೆ: ತನ್ನ ಸಾವಿಗೆ ನಾನೇ ಕಾರಣ ಎಂದು ಸೂಸೈಡ್ ನೋಟ್ ಬರೆದಿಟ್ಟು ವ್ಯಕ್ತಿ ನಾಪತ್ತೆ – Vishwanews24

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

2 days ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

2 days ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

2 days ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

2 days ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

2 days ago