BREAKING NEWS – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿಯ ಅವ್ಯವಸ್ಥೆ: ಬ್ಯಾರಿಗೇಟಿಗೆ ಗುದ್ದಿದ ಬೈಕ್ ಹಿಂಬದಿಯಿದ್ದ ಯುವತಿ ಸಾವು : ಸವಾರ ಗಂಭೀರ : vishwanews24
ಕಟಪಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿಯ ಅವ್ಯವಸ್ಥೆ: ಬ್ಯಾರಿಗೇಟಿಗೆ ಗುದ್ದಿದ ಸ್ಕೂಟಿ ಹಿಂಬದಿಯಿದ್ದ ಯುವತಿ ಸಾವು : ಸವಾರ ಗಂಭೀರ : vishwanews24
ಕಾಪು: ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಬಳಿ ಅರ್ಧಂಬರ್ಧ ಮಾಡಿ ಬಿಟ್ಟುಹೋದ ಹೆದ್ದಾರಿ ಕಾಮಗಾರಿಗೆ ಅಡ್ಡಲಾಗಿ ಹಾಕಿದ್ದ ಬ್ಯಾರಿಗೇಟಿಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಕೂಟಿಯ ಹಿಂಬದಿಯಲ್ಲಿದ್ದ ಯುವತಿ ಸಾವನ್ನಪ್ಪಿದ್ದು ಸವಾತ ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ.
ಗಾಯಗೊಂಡ ಸವಾರರನ್ನು ಸಾರ್ವಜನಿಕರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು ಘಟನೆಯ ಸಂಪೂರ್ಣ ವಿವರ ಇನ್ನಷ್ಟೇ ಸಿಗಬೇಕಾಗಿದೆ.
ಕಳೆದ ಒಂದು ವಾರದಿಂದ ಕಟಪಾಡಿ ಬದಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು ಈ ಕಾಮಗಾರಿಯು ಅರ್ಧಂಬರ್ಧವಾಗಿದ್ದು ಸರಿಯಾದ ಯಾವುದೇ ನಾಮಫಲಕ ಅಳವಡಿಸಿದ ಪರಿಣಾಮವಾಗಿ ಹೆದ್ದಾರಿಯಲ್ಲಿ ದಿನೇ ದಿನೇ ಅಪಘಾತಗಳು ಹೆಚ್ಚಾಗುತ್ತಿದ್ದು ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಇನ್ನೂ ಕೂಡ ಕ್ರಮ ಕೈಗೊಳ್ಳದೆ ಇರುವುದರಿಂದ ಈ ರೀತಿಯ ಅನಾಹುತಗಳು ಸಂಭವಿಸುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.
