Featured

BREAKING NEWS – ಉಡುಪಿ : ಕಾಂಗ್ರೆಸ್ ಅಭ್ಯರ್ಥಿ ಉತ್ಸುಕನಾಗಿ ಕೆಪಿಸಿಸಿ ಗೆ ಎರಡು ಲಕ್ಷದ ಡಿಡಿ ರವಾನೆ ಮಾಡಿದ ರಮೇಶ್ ಕಾಂಚನ್ – Vishwanews24

ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಉತ್ಸುಕನಾಗಿ ಕೆಪಿಸಿಸಿ ಗೆ ಎರಡು ಲಕ್ಷದ ಡಿಡಿ ರವಾನೆ ಮಾಡಿದ ರಮೇಶ್ ಕಾಂಚನ್

ಉಡುಪಿ ಜಿಲ್ಲೆಯಲ್ಲಿ ಪ್ರಪ್ರಥಮ ಕಾಂಗ್ರೇಸ್ ಟಿಕೆಟ್ ಉತ್ಸುಕ ಅರ್ಜಿಗೆ ಡಿಡಿ ರವಾನೆ..

ಉಡುಪಿ: ಕರಾವಳಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯ ಕಾವು ಜಾಸ್ತಿಯಾಗುತ್ತಿದ್ದಂತೆ ರಾಷ್ಟ್ರೀಯ ಪಕ್ಷಗಳ ಚಟುವಟಿಕೆ ಗರಿಗೆದರುತ್ತಿದೆ.

ಈ‌ ನಡುವೆ ಎರಡು ಪಕ್ಷಗಳಲ್ಲಿ ಅಭ್ಯರ್ಥಿಗಳ ಪೈಪೋಟಿಯು ಜಾಸ್ತಿ ಆಗುತ್ತಿದ್ದು ಟಿಕೆಟ್ ಗಾಗಿ ರಾಜ್ಯ ರಾಜಧಾನಿಯ ನಾಯಕರ ಹಿಂದೆ ಓಡುವ ಪಡೆಯೂ ದೊಡ್ಡದಾಗಿದೆ.

ಈ ಬೆಳವಣಿಗೆಯ ಮಧ್ಯೆ ಕಾಂಗ್ರೆಸ್ ಪಕ್ಷದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವವರು ಅರ್ಜಿ ಸಲ್ಲಿಸಬೇಕು. ನವೆಂಬರ್‌ 5 ರಿಂದ 15 ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಜಯರಾಮ್ ಬನನ್ ಅವರಿಂದ ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ತಿರುಗಾಟಕ್ಕೆ 25 ಲಕ್ಷ ರೂ. ವೆಚ್ಚದ ಟಾಟಾ ಸಮೂಹದ ನೂತನ ಲಾರಿ ಸೇವೆ – Vishwanews24

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅರ್ಜಿಗೆ 5 ಸಾವಿರ ರೂ. ನಿಗದಿ ಮಾಡಲಾಗಿದೆ. ಜೊತೆಗೆ ಅರ್ಜಿ ಸಲ್ಲಿಸುವಾಗ ಸಾಮಾನ್ಯ ವರ್ಗದವರು 2 ಲಕ್ಷ ರೂ., ಎಸ್‌ಸಿ, ಎಸ್‌ಟಿಯವರು 1 ಲಕ್ಷ ರೂ. ಡಿಡಿಯನ್ನು ಲಗತ್ತಿಸಬೇಕು. ಆ ಹಣವನ್ನು ಕೆಪಿಸಿಸಿ ಕಟ್ಟಡದ ನಿರ್ಮಾಣಕ್ಕೆ ಬಳಸಿಕೊಳ್ಳುತ್ತದೆ. ನಾನು ಕೂಡ ಸ್ಪರ್ಧೆ ಮಾಡಲೂ ಅರ್ಜಿ ಸಲ್ಲಿಸಬೇಕು. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕೆಂದು ಕೊಂಡವರು ಮೊದಲು ಅರ್ಜಿ ಸಲ್ಲಿಸಿ ಎಂದು ಹೇಳಿದರು.

ಹಾಗಾಗಿ ಬರೀ ಡಂಗುರ ಸಾರಿಸಿ ಬ್ಯಾನರ್ ಕಟ್ಟಿ ಟಿಕೆಟ್ ಆಕಾಂಕ್ಷಿ ಎಂದು ಊರು ಸುತ್ತುವ ಅಭ್ಯರ್ಥಿಗಳಿಗೆ ಶಾಕ್ ನೀಡಲು ಕಾಂಗ್ರೆಸ್ ಈ ಬಾರಿ ಮಹತ್ವದ ಯೋಜನೆಯನ್ನ ಕೈಗೊಂಡಿದೆ.

ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಆಗಬೇಕಾದರೂ ಕೂಡ ಆತ ಎರಡು ಲಕ್ಷ ರೂಪಾಯಿಯನ್ನು ಡಿಡಿ ಮಾಡಬೇಕು ಮತ್ತು ಅರ್ಜಿ ನಮೂನೆಗೆ 5,000  ಡಿಡಿ ಮಾಡಿ ಕೆಪಿಸಿಸಿಗೆ ಸಲ್ಲಿಸಬೇಕಾಗಿದೆ.

ಈ ಪೈಕಿ ಉಡುಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಎರಡು ಲಕ್ಷದ ಐದು ಸಾವಿರ ರೂಪಾಯಿ ಕೆಪಿಸಿಸಿಗೆ ರವಾನೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ನಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ರಮೇಶ್ ಕಾಂಚನ್ ಪ್ರಸ್ತುತ ಉಡುಪಿ ನಗರಸಭೆಯಲ್ಲಿ ನಾಲ್ಕು ಮಂದಿ ಕಾಂಗ್ರೆಸ್ ಕೌನ್ಸಿಲರ್ ಗಳಲ್ಲಿ ಇವರು ಕೂಡ ಒಬ್ಬರು ಮತ್ತು ವಿರೋಧ ಪಕ್ಷದ ನಾಯಕರಾಗಿದ್ದಾರೆ , ಕಾಂಚನ್  ಸಲ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಪುತ್ತೂರು: ಅನಾರೋಗ್ಯದಿಂದ 8ನೇ ತರಗತಿ ವಿದ್ಯಾರ್ಥಿನಿ ಸಾವು – Vishwanews24

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago