BREAKING ಇಲ್ಲದ NEWS ಕೊಟ್ಟ ರಾಜ್ಯ ಬಿಜೆಪಿ ಅಧ್ಯಕ್ಷ ಯಡ್ಯೂರಪ್ಪ

Featured, ರಾಜ್ಯ ನ್ಯೂಸ್

ಬೆಂಗಳೂರು, ಮಾರ್ಚ್ 16 : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ಯುಡ್ಯೂರಪ್ಪನವರು ನಿನ್ನೆ ಸಂಜೆ ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ನಾಳೆ ಸಂಜೆ 5 ಗಂಟೆಗೆ BREAKING NEWS ಕೊಡುವುದಾಗಿ ಹೇಳಿಕೊಂಡಿದ್ದರು. ರಾಜ್ಯ ರಾಜಕಾರಣದಲ್ಲಿ ಭಾರೀ ತಲ್ಲಣ ಉಂಟಾಗುತ್ತದೆ ಎಂದೇ ಹಲವರ ನಿರೀಕ್ಷೆಯಾಗಿತ್ತು. ಆದರೆ ಇಂದು ಆದದ್ದೇ ಬೇರೆ. ಚಾತಕ ಪಕ್ಷಿಗಳಂತೆ ಕಾದು ಕುಳಿತಿದ್ದವರಿಗೆ ಮಾತ್ರ ನಿರಾಶೆಯಾಗಿತ್ತು.

ಇಂದು ಸಂಜೆ 5.40ಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪ್ರತ್ಯಕ್ಷರಾಗಿ ಯಡಿಯೂರಪ್ಪ, ಎಂದಿನಂತೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಟೀಕಾಸ್ತ್ರಗಳನ್ನು ಎಸೆದರು.

* ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ಆರ್ಥಿಕ ಸ್ಥಿತಿಯನ್ನು ಹದಗೆಡಿಸಿದೆ. ರಾಜ್ಯದ ಜನರ ಮೇಲೆ ಸಾಲದ ಹೊರೆಯನ್ನು ಹೊರಿಸಿದೆ.

* ಜನರು ನಮ್ಮ ಮೇಲೆ ಭರವಸೆ ಇಟ್ಟಿದ್ದಾರೆ ಎಂದು ಸರ್ಕಾರ ಹೇಳಿತ್ತು. ಆದರೆ, ಜನರು ಇಟ್ಟ ಭರವಸೆಯನ್ನು ಸರ್ಕಾರ ಉಳಿಸಿಕೊಂಡಿಲ್ಲ. 

* ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ.

* ಕೃಷಿ, ಸೇವೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಅಭಿವೃದ್ಧಿ ಸಂಪೂರ್ಣವಾಗಿ ಕುಂಠಿತವಾಗಿದೆ. ಹೈದರಾಬಾದ್-ಕರ್ನಾಟಕ ಭಾಗದಲ್ಲಿಯೂ ಅಭಿವೃದ್ಧಿ ಕುಂಠಿತವಾಗಿದೆ. ನೀರಾವರಿ ಕ್ಷೇತ್ರದಲ್ಲಿ ಯೋಜನೆಗಳು ಸ್ಥಗಿತಗೊಂಡಿವೆ.

* ಕಳೆದ 5 ವರ್ಷಗಳಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಹಿಂದಿನ ಯಾವ ಸರ್ಕಾರವೂ ಮಾಡದಷ್ಟು ಸಾಲವನ್ನು ಈ ಸರ್ಕಾರ ಮಾಡಿದೆ. ಪ್ರತಿಯೊಬ್ಬ ಕನ್ನಡಿಗನ ಮೇಲೆ 45 ಸಾವಿರ ರೂ. ಸಾಲದ ಹೊರೆಯನ್ನು ಸರ್ಕಾರ ಹೊರಿಸಿದೆ.

ಹಾಗಾಗಿ ವಿಶ್ವಾಸ ದ್ರೋಹವೆಸಗಿದ ದೂರವಿಟ್ಟು ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಕರೆ ನೀಡಿದ್ದಾರೆ.

ರಾಜ್ಯದ ಹಲವೆಡೆ ಮಳೆ ಬಂದ ಕಾರಣ ಪಟಾಕಿಯು ಠುಸ್ ಆಯ್ತು ಎನ್ನುವ ಮೂಲಕ ಈ breaking news ಗೆ
ವ್ಯಂಗ್ಯದ ಮಾತುಗಳು ಕೇಳಿ ಬಂದಿವೆ.