Breaking : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ‘ಕಲ್ಯಾಣ್ ಸಿಂಗ್’ ವಿಧಿವಶ -Vishwanews24
Breaking ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ‘ಕಲ್ಯಾಣ್ ಸಿಂಗ್’ ವಿಧಿವಶ -Vishwanews24
ನವದೆಹಲಿ : ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ (89) ಕೆಲ ನಿಮಿಷಗಳ ಹಿಂದೆ ಲಖನೌನ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.
ಕಲ್ಯಾಣ್ ಸಿಂಗ್ ನಿಧನಕ್ಕೇ ಪಿಎಂ ನರೇಂದ್ರ ಮೋದಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸೇರಿದಂತೆ ಹಲವು ನಾಯಕರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.ಕಲ್ಯಾಣ್ ಸಿಂಗ್ ಅವರು ಹಲವು ತಿಂಗಳುಗಳಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಎಸ್ಜಿಪಿಜಿಐ) ಕಳೆದ 51 ದಿನಗಳ ಹಿಂದೆ ದಾಖಲು ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ.
