BREAKING : ತುಂಗಾ ಕಾಲುವೆಯಲ್ಲಿ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ‘ಚಂದ್ರಶೇಖರ್’ ಮೃತದೇಹ ಪತ್ತೆ – Vishwanews24
BREAKING : ತುಂಗಾ ಕಾಲುವೆಯಲ್ಲಿ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ‘ಚಂದ್ರಶೇಖರ್’ ಮೃತದೇಹ ಪತ್ತೆ
ದಾವಣಗೆರೆ: ಕಳೆದ ಐದು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಶವ ಪತ್ತೆಯಾಗಿದೆ. ಕಡದಕಟ್ಟೆ ಬಳಿ ತುಂಗಾ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಮೊದಲಿಗೆ ಕಡದಕಟ್ಟೆಯ ತುಂಗಾ ಕಾಲುವೆ ಬಳಿ ಕಾರು ಸಂಚರಿಸಿರುವ ಕುರುಹುಗಳು ಪತ್ತೆಯಾಗಿದ್ದವು,. ಇದನ್ನು ಪೊಲೀಸರು ಪರಿಶೀಲನೆ ಮಾಡಿದ ಬಳಿಕ ಕಾರು ಸಹ ತುಂಗ ಕಾಲುವೆಯಲ್ಲಿ ಪತ್ತೆಯಾಗಿದೆ. ಅಲ್ಲದೇ ಕಾರಿನಲ್ಲಿ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಮೃತದೇಹ ಸಿಕ್ಕಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆಯಲ್ಲಿ ಬಿಳಿ ಬಣ್ಣದ ಕಾರು ಪತ್ತೆಯಾಗಿದ್ದು, ಕ್ರೇನ್ ಬಳಸಿ ಕಾರನ್ನು ಮೇಲೆತ್ತಿದ್ದಾರೆ. ಬಳಿಕ ಕಾರಿನಲ್ಲಿ ಚಂದ್ರಶೇಖರ್ ಶವ ಸಹ ಪತ್ತೆಯಾಗಿದೆ. ಕಾರನ್ನು ಕಾಲುವೆಯಿಂದ ಮೇಲೆತ್ತಿದಾಗ ಏರ್‌ಬ್ಯಾಗ್ ಓಪನ್ ಆಗಿರುವುದು ಕಂಡುಬಂದಿದೆ.ಇನ್ನು ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಚಂದ್ರಶೇಖರ್ ಮೃತದೇಹ ಪತ್ತೆಯಾಗಿದೆ. ಸೋದರನ ಪುತ್ರನ ಶವ ಕಂಡು ರೇಣುಕಾಚಾರ್ಯ ಅವರ ಆಕ್ರಂದನ ಮುಗಿಲುಮುಟ್ಟಿದೆ.
