BREAKING : ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೆ.ಎಸ್‌.ಈಶ್ವರಪ್ಪ -Vishwanews24

Featured, ರಾಜ್ಯ ನ್ಯೂಸ್

BREAKING : ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಕೆ.ಎಸ್‌.ಈಶ್ವರಪ್ಪ

ಶಿವಮೊಗ್ಗ: ವಿಪಕ್ಷಗಳ ತೀವ್ರ ಒತ್ತಾಯ, ಬಿಜೆಪಿ ಹೈಕಮಾಂಡ್‌ ಬೇಸರ ಹಾಗೂ ಸಿಎಂ ಸಲಹೆ ಮೇರೆಗೆ ಕೊನೆಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಯಾರೆಂದು ನನಗೆ ಗೊತ್ತೇ ಇಲ್ಲ. ಸುಖಾಸುಮ್ಮನೆ ನನ್ನ ಮೇಲೆ ಆರೋಪ ಮಾಡಲಾಗಿದೆ. ಸಂತೋಷ್‌ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ನಿನ್ನೆ ಈಶ್ವರಪ್ಪ ಖಡಕ್‌ ಆಗಿ ಹೇಳಿದ್ದರು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ಇಂದು ಸಂಜೆ ತುರ್ತು ಪತ್ರಿಕಾ ಗೋಷ್ಠಿ ನಡೆಸಿ ಶುಕ್ರವಾರ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

Leave a Reply