ಕಲಬುರಗಿ: ನಮ್ಮ ಬಳಿ 104 ಶಾಸಕರಿದ್ದಾರೆ ಅಂತಾ ಹೇಳೋ ಗೋಮುಖ ವ್ಯಾಘ್ರ ಇದ್ದಾರಲ್ಲ ಅವರೇ ಸಮ್ಮಿಶ್ರ ಸರ್ಕಾರದ ವಿಲನ್ ಅಂತಾ ಕಲಬುರಗಿಯಲ್ಲಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಮ್ಮಿಶ್ರ ಸರ್ಕಾರದ ನಿಜವಾದ ವಿಲನ್ ಯಾರು ಎಂಬ ಮಾಧ್ಯಮದವರ ಪ್ರಶ್ನೆಗೆ ಸಿಎಂ ಈ ಹೇಳಿಕೆ ನೀಡುವ ಮೂಲಕ ಬಿಎಸ್ ಯಡಿಯೂರಪ್ಪ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.
ಈ ಸರ್ಕಾರ ಸಂಪೂರ್ಣವಾದ ಸುಭದ್ರವಾದ ಸರ್ಕಾರವಾಗಿದ್ದು, ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯರವರ ರಕ್ಷಣೆಯೇ ದೊಡ್ಡ ಮಟ್ಟದಲ್ಲಿ ಇದೆ. ಬಹಳ ಜನಕ್ಕೆ ಈ ವಿಷಯ ತಿಳಿಸಿಲ್ಲ. ಸಿದ್ದರಾಮಯ್ಯ ಅವರಿಂದಲೇ ಸಂಪೂರ್ಣವಾದ 5 ವರ್ಷದ ಈ ಅವಧಿ ಪೂರೈಸಲಿದೆ. ಸುಮ್ಮನೆ ಅವರನ್ನು ಕೆಲವೊಂದು ವರ್ಗದಲ್ಲಿ ಅನಾವಶ್ಯಕವಾಗಿ ಅವರ ಹೆಸರನ್ನು ಎಳೆಯುತ್ತಾರೆ. ಸಿದ್ದರಾಮಯ್ಯ ಅವರು ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ. ಹೀಗಾಗಿ ಇವತ್ತು ಸರ್ಕಾರದಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ. ಸಿದ್ದರಾಮಯ್ಯರಿಂದಲೇ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ ಎಂಬುದೆಲ್ಲಾ ಸುಳ್ಳು ಅಂತ ಹೇಳುವ ಮೂಲಕ ಮಾಜಿ ಸಿಎಂ ಪರ ಎಚ್‍ಡಿಕೆ ಬ್ಯಾಟಿಂಗ್ ಮಾಡಿದರು.
ಜಾಹಿರಾತು: ಪಂಡೀತ್ ಸುದರ್ಶನ್ ಭಟ್
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…