Budget 2023 : ಮತ್ಸ್ಯ ಸಂಪದ ಯೋಜನೆಯಡಿ 6,000 ಕೋಟಿ ರೂ. ಅನುದಾನ – Vishwanews24
Budget 2023 : ಮತ್ಸ್ಯ ಸಂಪದ ಯೋಜನೆಯಡಿ 6,000 ಕೋಟಿ ರೂ. ಅನುದಾನ
ನವದೆಹಲಿ: ಮೀನುಗಾರರು, ಕರಕುಶಲಕರ್ಮಿಗಳಿಗೆ ಉತ್ತೇಜನ ನೀಡುವ ಕೆಲಸಗಳು ಕೇಂದ್ರ ಸರ್ಕಾರದಿಂದ ನಡೆಯಲಿದೆ. ಮತ್ಸ್ಯ ಸಂಪದ ಯೋಜನೆಯಡಿ 6,000 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
2023-24ನೇ ಸಾಲಿನ ಬಜೆಟ್‌ನಲ್ಲಿ ಮೀನುಗಾರರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮೀನುಗಾರರ ಕಲ್ಯಾಣದ ದೃಷ್ಟಿಯಿಂದ ಹಲವು ಮಹತ್ವದ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಲಿದೆ. ಅದಕ್ಕಾಗಿ ಮತ್ಸ್ಯ ಸಂಪದ ಯೋಜನೆಯಡಿ 6,000 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗುವುದು ಎಂದರು.
Budget 2023 :ಒಂದು ಕೋಟಿ ರೈತರಿಗೆ ನೈಸರ್ಗಿಕ ಕೃಷಿ ಅಳವಡಿಕೆಗೆ ನೆರವು – VIshwanews24
ಇನ್ನು ಪಿಎಂ ವಿಶ್ವಕರ್ಮ ಕೌಶಲ ಸನ್ಮಾನ್ ಯೋಜನೆಯಡಿ ಪಾರಂಪರಿಕ ಕರಕುಶಲಕರ್ಮಿಗಳಿಗೆ ನೆರವಾಗಲು ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಸಣ್ಣ ಉದ್ದಿಮೆಗಳ ಅಭಿವೃದ್ಧಿಗೆ ರೂಪಿಸಿರುವ ಕಾರ್ಯಕ್ರಮಗಳೊಂದಿಗೆ ಇವರನ್ನು ಜೋಡಿಸಿ, ಕುಶಲಕರ್ಮಿಗಳ ಅರ್ಥಿಕ ಸ್ಥಿತಿಗತಿ ಸುಧಾರಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
Budget 2023 : ಇನ್ಮುಂದೆ ಎಲ್ಲಾ ಡಿಜಿಟಲ್ ವ್ಯವಹಾರಗಳಿಗೆ ‘PAN ‘ಕಡ್ಡಾಯ – Vishwanews24
