Featured

Budget 2024 : ಪಿಎಂ ಸೂರ್ಯೋದಯ ಯೋಜನೆಗೆ ವಿಶೇಷ ಒತ್ತು ; ಒಂದು ಕೋಟಿ ಮನೆಗಳಿಗೆ ಸೋಲಾರ್ ಮೇಲ್ಛಾವಣಿ : ನಿರ್ಮಲಾ ಸೀತಾರಾಮನ್ – vishwanews24

Budget 2024 : ಪಿಎಂ ಸೂರ್ಯೋದಯ ಯೋಜನೆಗೆ ವಿಶೇಷ ಒತ್ತು  ಒಂದು ಕೋಟಿ ಮನೆಗಳಿಗೆ ಸೋಲಾರ್ ಮೇಲ್ಛಾವಣಿ : ನಿರ್ಮಲಾ ಸೀತಾರಾಮನ್

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಅವರು ಮಂಡಿಸಿದ ಮಧ್ಯಂತರ ಬಜೆಟ್‍ನಲ್ಲಿ ಇತ್ತೀಚೆಗೆ ಘೋಷಣೆಯಾದ `ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ’ಗೆ  ವಿಶೇಷ ಒತ್ತು ನೀಡಲಾಗಿದೆ. ಮನೆಗಳಿಗೆ ಸೋಲಾರ್ ಮೇಲ್ಛಾವಣಿ ಅಳವಡಿಸುವ ಈ ಯೋಜನೆ ಬಗ್ಗೆ ಅವರು ತಮ್ಮ ಬಜೆಟ್ ಭಾಷಣದಲ್ಲಿ ವಿಶೇಷವಾದ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಯೋಜನೆಯ ಮೂಲಕ ಒಂದು ಕೋಟಿ ಮನೆಗಳಲ್ಲಿ ಸೌರ ಮೇಲ್ಛಾವಣಿ ಅಳವಡಿಸಲು ಉದ್ದೇಶಿಸಲಾಗಿದೆ. ಇದರಿಂದ ಒಂದು ಮನೆಗೆ ತಿಂಗಳಿಗೆ ಸುಮಾರು 300 ಯೂನಿಟ್ ವಿದ್ಯುತ್ ಉಳಿತಾಯವಾಗುತ್ತದೆ. ವಾರ್ಷಿಕವಾಗಿ 15,000-18,000 ರೂ.ಗಳ ಉಳಿತಾಯವಾಗಲಿದೆ ಎಂದು ಅವರು ಹೇಳಿದ್ದಾರೆ.

ಸರ್ಕಾರಿ ಸ್ವಾಮ್ಯದ ಆರ್‌ಇಸಿ ಲಿಮಿಟೆಡ್‍ನ್ನು ಯೋಜನೆಯ ಅನುಷ್ಠಾನ ಏಜೆನ್ಸಿಯಾಗಿ ನೇಮಿಸಲಾಗಿದೆ. ಒಂದು ವರ್ಷದೊಳಗೆ ಒಂದು ಕೋಟಿ ಮನೆಗಳಲ್ಲಿ ಮೇಲ್ಛಾವಣಿ ಸೌರ ಅಳವಡಿಕೆಗಳನ್ನು ಹೊಂದುವ ಗುರಿಯನ್ನು ಹೊಂದಿದೆ. ಜ.22 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಸಮಾರಂಭದ ನಂತರ ಅಯೋಧ್ಯೆಯಿಂದ ಹಿಂದಿರುಗಿದ ನಂತರ ಒಂದು ಕೋಟಿ ಮನೆಗಳಲ್ಲಿ ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು.

ಈ ಯೋಜನೆಯು ಈಗಾಗಲೇ ಜಾರಿಯಲ್ಲಿದೆ, ಇದು ಹೊಸ ಮಾರ್ಗಸೂಚಿಗಳು ಮತ್ತು ಪ್ರೋತ್ಸಾಹಗಳೊಂದಿಗೆ ಜಾರಿಯಾಗಲಿದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago