Category: ರಾಷ್ಟ್ರ ನ್ಯೂಸ್
ಕಾಂಗ್ರೆಸ್ ಪಕ್ಷ ಅಧಿಕಾರ ವಹಿಸಿಕೊಂಡ ಮೂರು ರಾಜ್ಯಗಳಲ್ಲಿ ರೈತರ ಸಾಲಮನ್ನಾ ನಿಶ್ಚಿತ : ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
ನವದೆಹಲಿ: ಕಾಂಗ್ರೆಸ್ ಅಧಿಕಾರ ವಹಿಸಿಕೊಂಡ ಮೂರು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡುವುದು ನಿಶ್ಚಿತ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಹೇಳಿದ್ದಾರೆ. ರಾಹುಲ್ ಛತ್ತೀಸ್ಗಢ, ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನಗಳೊಳಗೆ ರೈತರ ಸಾಲಮನ್ನಾ ಮಾಡುವುದಾಗಿ ಪ್ರಚಾರದ ವೇಳೆ […]
ರಫೇಲ್ ಡೀಲ್ ಪ್ರಕರಣ ; ತನಿಖೆ ಅಗತ್ಯವಿಲ್ಲ ಎಂದ ಸುಪ್ರೀಂಕೋರ್ಟ್: ಕೇಂದ್ರ ಸರ್ಕಾರ ಕ್ಕೆ ಬಿಗ್ ರಿಲೀಫ್..
ನವದೆಹಲಿ:ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ಆರೋಪ ಕುರಿತಂತೆ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ತಿರಸ್ಕರಿಸಿದ್ದು, ರಫೇಲ್ ಪ್ರಕರಣದ ತನಿಖೆ ಅಗತ್ಯವಿಲ್ಲ ಎಂದು ತೀರ್ಪು ನೀಡುವ ಮೂಲಕ ಕೇಂದ್ರಕ್ಕೆ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ […]
ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರ ಹೊಂದಿರುವ 100 ರೂ. ನಾಣ್ಯ ಬಿಡುಗಡೆ ಮಾಡಲು ನಿರ್ಧಾರಿಸಿದ ಕೇಂದ್ರ ಸರ್ಕಾರ
ನವದೆಹಲಿ: ಭಾರತದ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರ ಇರುವ 100 ರೂ. ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ನಾಣ್ಯದ ಒಂದು ಭಾದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ […]
ಪ್ರಧಾನಿ ಮೋದಿ ಬೇರೆಯವರ ರೀತಿ ಮತ ಬ್ಯಾಂಕ್ ರಾಜಕೀಯ ಮಾಡುವುದಿಲ್ಲ ; ಅವರ ನಾಯಕತ್ವದ ಬಗ್ಗೆ ಅನುಮಾನ ಬೇಡ : ರಾಮ್ ದೇವ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಅವರ ನೀತಿಯ ಬಗ್ಗೆ ಯಾರೂ ಅನುಮಾನ ವ್ಯಕ್ತಪಡಿಸಬಾರದು ಎಂದು ಯೋಗ ಗುರು ರಾಮ್ ದೇವ್ ಹೇಳಿದ್ದಾರೆ. ರಾಜಸ್ತಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ ಗಡ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತ ನಂತರ ಭಾರತ ಆರ್ಥಿಕ […]
ಭಾರತವನ್ನು “ಸ್ವಾತಂತ್ರ ಭಾರತದ ಹಿಂದೂ ರಾಷ್ಟ್ರ”ವೆಂದು ಘೋಷಿಸಬೇಕು: ಮೇಘಾಲಯ ಹೈಕೋರ್ಟ್ ನ್ಯಾಯಾಧೀಶ
ಶಿಲ್ಲಾಂಗ್ :ಪಾಕಿಸ್ತಾನ ಹೇಗೆ ಇಸ್ಲಾಮಿಕ್ ರಾಷ್ಟ್ರವೆಂದು ಕರೆದುಕೊಳ್ಳುತ್ತಿದ್ದೆಯೋ ಅದೇ ರೀತಿಯಲ್ಲಿ ಭಾರತವನ್ನೂ ಸ್ವಾತಂತ್ರ ಭಾರತದ ಹಿಂದೂ ರಾಷ್ಟ್ರವೆಂದು ಘೋಷಿಸಬೇಕಾಗಿದೆ ಎಂದು ಮೇಘಾಲಯದ ಹೈಕೋರ್ಟ್ ನ್ಯಾಯಾಧೀಶ ಸುದೀಪ್ ರಂಜನ್ ಸೇನ್ ಹೇಳಿದ್ದಾರೆ. ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾದಿಂದ ಬಂದಿರುವ ಜನರು ಭಾರತದೊಳಗೆ ವಾಸಿಸಲು ಅವಕಾಶ ಕಲ್ಪಿಸುವ […]
ಪ್ಯಾನ್ ಕಾರ್ಡ್ ನಲ್ಲಿ ತಂದೆಯ ಹೆಸರು ಕಡ್ಡಾಯವಲ್ಲ..
ನವದೆಹಲಿ: ಪ್ಯಾನ್ ಕಾರ್ಡ್ ನಲ್ಲಿ ತಂದೆ ಹೆಸರು ಕಡ್ಡಾಯವಾಗಿ ನಮೂದಿಸಬೇಕು ಎಂಬ ನಿಯಮವನ್ನು ಆದಾಯ ತೆರಿಗೆ ಇಲಾಖೆ ಕೈಬಿಟ್ಟಿದ್ದು, ಈ ಸಂಬಂಧ ನಿಯಮ 114ಕ್ಕೆ ತಿದ್ದುಪಡಿ ತರಲಾಗಿದೆ. ಡಿಸೆಂಬರ್ 5ರಿಂದ ಹೊಸ ನಿಯಮ ಜಾರಿಗೆ ಬಂದಿದ್ದು, ಸಿಂಗಲ್ ಪೇರೆಂಟ್ ಅಥವಾ ತಾಯಿಯ ಬಳಿ […]
ರೈತರ ಸಾಲ ಮನ್ನಾ ಮಾಡಲು ಮುಂದಾದ ಕೇಂದ್ರ ಸರ್ಕಾರ
ನವದೆಹಲಿ : ಕೇಂದ್ರ ಸರ್ಕಾರ, ರೈತರ ಸಾಲ ಮನ್ನಾ ಮಾಡುವ ಕುರಿತಂತೆ ಮಹತ್ವದ ತೀರ್ಮಾನವನ್ನು ಕೈಗೊಳ್ಳಲು ಮುಂದಾಗಿದೆ ಎಂಬುದಾಗಿ ತಿಳಿದುಬಂದಿದೆ. ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ […]
ಮಧ್ಯಪ್ರದೇಶದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್‌ಗೆ ಬೆಂಬಲ: ಮಾಯಾವತಿ
ನವದೆಹಲಿ: ಮಧ್ಯಪ್ರದೇಶದಲ್ಲಿ ಅತಂತ್ರ ವಿಧಾನಸಭೆಯು ನಿರ್ಮಾಣವಾಗಿರುವ ಕಾರಣದಿಂದ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್ ಗೆ ಬೆಂಬಲ ನೀಡುವುದಾಗಿ ಬಹುಜನ ಸಮಾಜ ಪಕ್ಷ(ಬಿಎಸ್ ಪಿ) ನಾಯಕಿ ಮಾಯಾವತಿ ಹೇಳಿದ್ದಾರೆ. ಕಾಂಗ್ರೆಸ್ ನ ಹಲವು ನೀತಿಗಳಿಗೆ ನನ್ನ ಸಹಮತವಿಲ್ಲ, ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದು ನಮ್ಮ ಗುರಿ. […]
ಬಿಜೆಪಿ ಮುಕ್ತ ಭಾರತದ ಆರಂಭ : ರಮ್ಯ
ನವದೆಹಲಿ: ಐದು ರಾಜ್ಯಗಳಲ್ಲಿ ಪೈಕಿ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುತ್ತಲೇ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ತಮ್ಮದೇ ಶೈಲಿಯಲ್ಲಿ ಟ್ವೀಟ್ ಮಾಡುವ ಮೂಲಕ ಬಿಜೆಪಿಯನ್ನು ಕುಟುಕಿದ್ದಾರೆ. 2017ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವನ್ನು ಕಂಡಿತ್ತು. ಪಂಜಾಬ್ ಹೊರತುಪಡಿಸಿ […]
ಹಿಂದುಗಳ ಹೆಸರಿನಲ್ಲಿ ಬಿಜೆಪಿ ಸುಳ್ಳು ಹೇಳುತ್ತಿರುವ ಪಕ್ಷ : ಮಮತಾ ಬ್ಯಾನರ್ಜಿ
ಪುರ್ಬಾ ಮೇದಿನಿಪುರ್: ಬಿಜೆಪಿ ಯು ಹಿಂದೂಗಳ ಹೆಸರಿನಲ್ಲಿ ಸುಳ್ಳು ಹೇಳುತ್ತಿರುವ ಪಕ್ಷ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುಡುಗಿದರು. ಜಿಲ್ಲೆಯಲ್ಲಿ ಬುಧವಾರ ನಡೆದ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಬಿಜೆಪಿಗೆ […]
