ಕಾಪು ಕ್ಷೇತ್ರದ ಅಭಿವೃದ್ಧಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿ ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು : ಶಾಸಕ ಲಾಲಾಜಿ ಆರ್ ಮೆಂಡನ್ -Vishwanews24

ಕಾಪು : ಕಾಪು ಕ್ಷೇತ್ರದ ಅಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಇದರ ಸದ್ಬಳಕೆ ಮಾಡಿಕೊಂಡು ಸಮಗ್ರ ಅಭಿವೃದ್ಧಿಯತ್ತ ಎಲ್ಲಾ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿ ಕಾಪು ಕ್ಷೇತ್ರದ ಅಭಿವೃದ್ಧಿಗೆ ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು ಎಂದು ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು. ಬುಧವಾರ […]

ಬಿಜೆಪಿಯು ಕಾಂಗ್ರೆಸ್ ಮುಕ್ತ ರಾಷ್ಟ್ರವನ್ನಾಗಿ ನಿರ್ಮಿಸಲು ಪ್ರಯತ್ನಿಸುತ್ತಿದೆ : ವಿನಯ್ ಕುಮಾರ್ ಸೊರಕೆ -Vishwanews24

ಉಡುಪಿ,: ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಬುಧವಾರ ಪ್ರತಿಭಟನೆ ನಡೆಸಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಡಿ.ಕೆ.ಶಿವಕುಮಾರ್ ತಮ್ಮ ವಿದ್ಯಾರ್ಥಿ ಜೀವನದಿಂದ ಕಾಂಗ್ರೆಸ್‌ನಲ್ಲಿದ್ದಾರೆ. ಕಳೆದ 2-3 ವರ್ಷಗಳಿಂದ […]

ಉಡುಪಿ: ಹುಲಿವೇಷಧಾರಿಗಳ ಟೆಂಪೋ ಪಲ್ಟಿ : ಓರ್ವ ಸಾವು, ಹಲವು ಮಂದಿಗೆ ಗಾಯ -Vishwanews24

ಉಡುಪಿ: ಹುಲಿವೇಷ ತಂಡದ ಟೆಂಪೋವೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಸಂತೆಕಟ್ಟೆಯ ನೇಜಾರು ಸಮೀಪ ಇಂದು ನಡೆದಿದೆ. ಪಡುಬಿದ್ರಿಯ ಸುಮಂತ್ (22) ಮೃತ ವೇಷಧಾರಿ ಎಂದು ಗುರುತಿಸಲಾಗಿದೆ. ಗಾಯಗೊಂಡ ಹುಲಿವೇಷಧಾರಿಗಳು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ […]

ಜೆಡಿಎಸ್ ಪಕ್ಷಕ್ಕೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ ಪ್ರಮೋದ್ ಮಧ್ವರಾಜ್ -Vishwanews24

ಉಡುಪಿ: ಕಳೆದ ಬಾರಿಯ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜೀ ಸಚಿವ ಪ್ರಮೋದ್ ಮಧ್ವರಾಜ್ ಅವರು ಇದೀಗ ಜೆಡಿಎಸ್ ಪಕ್ಷಕ್ಕೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು […]

ಮುಜರಾಯಿ ದೇವಸ್ಥಾನಗಳ ಅಭಿವೃದ್ಧಿಗೆ 1 ಕೋ. ರೂ. ವರೆಗೆ ಮಂಜೂರಾತಿಗೆ ಜಿಲ್ಲಾಧಿಕಾರಿಗಳಿಗೆ ಅವಕಾಶ : ಸಚಿವ ಕೋಟ ಶ್ರೀನಿವಾಸ ಪೂಜಾರಿ -Vishwanews24

ಉಡುಪಿ,: ಮುಜರಾಯಿ ಇಲಾಖೆಯ ವ್ಯಾಪ್ತಿಗೊಳಪಡುವ ದೇವಸ್ಥಾನಗಳಲ್ಲಿ ಮೂಲಭೂತ ಸೌಕರ್ಯ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಗೆ 1 ಕೋಟಿ ರೂಪಾಯಿಗಳ ವರೆಗೆ ಮಂಜೂರಾತಿಗೆ ಅಧಿಕಾರ ನೀಡುವ ಪ್ರಸ್ತಾವನೆ ರಾಜ್ಯ ಸರಕಾರದ ಮುಂದೆ ಇದೆ ಎಂದು ಮುಜರಾಯಿ, ಬಂದರು ಮತ್ತು ಮೀನುಗಾರಿಕಾ ಸಚಿವ […]

ಸೆಪ್ಟೆಂಬರ್ 7 ರಂದು ಪಡುಬಿದ್ರಿಯಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ -Vishwanews24

ಉಡುಪಿ:ದಿನಾಂಕ 07-09-2019 ನೇ ಶನಿವಾರ ಪಡುಬಿದ್ರಿಯ ಸಾಗರ ವಿದ್ಯಾ ಮಂದಿರ ಶಾಲೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ ಇದರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟವು ನಡೆಯಲಿರುವುದು. 17ರ […]

ಉಡುಪಿ : ನಗರವನ್ನು ಅಭಿವೃದ್ಧಿ ಮಾಡುವುದು ದೊಡ್ಡ ಸಂಗತಿಯೇ ಅಲ್ಲ, ಅಧಿಕಾರಿಗಳು ಒತ್ತಡ ನಿಭಾಯಿಸಿಕೊಂಡು ಕೆಲಸ ನಿರ್ವಹಿಸಿದರೆ ಎಲ್ಲವೂ ಸಾಧ್ಯ: ನೂತನ ಜಿಲ್ಲಾಧಿಕಾರಿ -Vishwanews24

ಉಡುಪಿ: ನಗರಸಭೆಯಲ್ಲಿ ಕೆಲಸ ಮಾಡುವ ಅಧಿಕಾರಿಗಳು ಬೆಳಗ್ಗೆ 6 ಗಂಟೆಯಿಂದಲೇ ಕೆಲಸ ಮಾಡುವ ಮನಸ್ಥಿತಿಯಲ್ಲಿ ಇರಬೇಕು. 10 ಗಂಟೆಗೆ ಕೆಲಸಕ್ಕೆ ಬರುವ ಅಧಿಕಾರಿಗಳು ಬೇಕಿಲ್ಲ.  ಮೈಸೂರು ಜಿಲ್ಲೆಯನ್ನು ನಂಬರ್‌ ವನ್‌ ಮಾಡಿದಂತೆ ಉಡುಪಿಯನ್ನೂ ಮಾಡಲು ಸಾಧ್ಯವಿದೆ. ಇದಕ್ಕಾಗಿ ಅಧಿಕಾರಿಗಳು ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕಿದೆ […]

ಜಿಲ್ಲೆಯಲ್ಲಿ ಮರಳುಗಾರಿಕೆ ಶೀಘ್ರ ಪ್ರಾರಂಭ : ಸಚಿವ ಕೋಟ ಶ್ರೀನಿವಾಸ ಪೂಜಾರಿ -Vishwanews24

ಉಡುಪಿ : : ಜಿಲ್ಲೆಯಲ್ಲಿ ಮರಳುಗಾರಿಕೆ ಪ್ರಾರಂಭಿಸಲು ಜಿಲ್ಲಾಡಳಿತ ಮಟ್ಟದಲ್ಲಿ ಹಲವು ಬದಲಾವಣೆ ಮಾಡಲಾಗಿದೆ. ಆಡಳಿತಾತ್ಮಕ ಸಮಸ್ಯೆ ನಿವಾರಿಸಿ ಶೀಘ್ರ ಮರಳು ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು  ಮುಜರಾಯಿ ಮತ್ತು ಬಂದರು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮೀನುಗಾರಿಕೆ […]

ಉಡುಪಿ:ಎಲ್ಲಾ ಇಲಾಖೆಗಳು ನಿಗಧಿತ ಅವಧಿಯೊಳಗೆ ಸಾರ್ವಜನಿಕರಿಗೆ ಸೇವೆ ಒದಗಿಸಬೇಕು :ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ:  ಉಡುಪಿ ಜಿಲ್ಲೆಯಲ್ಲಿ ಸಕಾಲ ವಿಲೇವಾರಿಯಲ್ಲಿ ವಿಳಂಬ ತೋರುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಸಕಾಲ ಅರ್ಜಿ ವಿಲೇವಾರಿಯಲ್ಲಿ ವಿಳಂಬ ತೋರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು. ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾ ಮಟ್ಟದ ನೋಡಲ್ […]

ಮೀನುಗಾರಿಕೆ, ಬಂದರು ಒಳನಾಡು ಸಾರಿಗೆ ಸಚಿವರಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ : ಮುಖ್ಯಮಂತ್ರಿಗಳಿಗೆ ಧನ್ಯವಾದ ಸಲ್ಲಿಸಿದ ಯಶ್‍ಪಾಲ್ ಸುವರ್ಣ -Vishwanews24

ಉಡುಪಿ: ಕರ್ನಾಟಕ ಸರಕಾರದ ನೂತನ ಮೀನುಗಾರಿಕೆ, ಬಂದರು ಒಳನಾಡು ಸಾರಿಗೆ ಖಾತೆಯ ಸಚಿವರಾಗಿ ಕರಾವಳಿ ಭಾಗದ ಕೋಟ ಶ್ರೀನಿವಾಸ ಪೂಜಾರಿಯರ ಆಯ್ಕೆ ಮಾಡಿದ ರಾಜ್ಯ ಸರಕಾರದ ನಡೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್‍ಪಾಲ್ […]