`CET’  ಪರೀಕ್ಷೆಗೆ ಹಾಜರಾಗುವವರು ಹಿಜಾಬ್ ಧರಿಸುವಂತಿಲ್ಲ: `KEA’ ಸ್ಪಷ್ಟನೆ – Vishwanews24

Featured, ರಾಜ್ಯ ನ್ಯೂಸ್

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬರುವವರಿಗೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ..

ಯಾವುದೇ ಧರ್ಮ ಸೂಚಕ ವಸ್ತ್ರ ಧರಿಸಿ ಸಿಇಟಿ ಪರೀಕ್ಷೆಗೆ ಬರುವಂತಿಲ್ಲ..

ಶೀಘ್ರವೇ ಸಮವಸ್ತ್ರ ಪಾಲನೆ ನಿಯಮ ಪ್ರಕಟಿಸಲಾಗುವುದು..

ಬೆಂಗಳೂರು : ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಈ ಬಾರಿ ಕಟ್ಟುನಿಟ್ಟಾಗಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಜ್ಯದಲ್ಲಿ ಜೂನ್ 16, 17 ಮತ್ತು 18 ರಂದು ಸಿಇಟಿ ಪರೀಕ್ಷೆ ನಡೆಯಲಿದೆ.

ಸಿಇಟಿ ಪರೀಕ್ಷೆಗೆ ಯಾವುದೇ ಸಮವಸ್ತ್ರ ನಿಗದಿ ಮಾಡಿಲ್ಲ. ಆದರೆ ಸರ್ಕಾರದ ವಸ್ತ್ರ ನಿಯಮವನ್ನು ಪಾಲಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯ ತಿಳಿಸಿದ್ದಾರೆ.

ಇನ್ನು ಸಿಇಟಿ ಪರೀಕ್ಷೆಗೆ ಹಾಜರಾಗುವವರು ಹಿಜಾಬ್ ಧರಿಸುವಂತಿಲ್ಲ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬರುವವರಿಗೆ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. ಜೊತೆಗೆ ಯಾವುದೇ ಧರ್ಮ ಸೂಚಕ ವಸ್ತ್ರ ಧರಿಸಿ ಸಿಇಟಿ ಪರೀಕ್ಷೆಗೆ ಬರುವಂತಿಲ್ಲ. ಶೀಘ್ರವೇ ಸಮವಸ್ತ್ರ ಪಾಲನೆ ನಿಯಮ ಪ್ರಕಟಿಸಲಾಗುವುದು ಎಂದು ಪರೀಕ್ಷಾ ಪ್ರಾಧಿಕಾರ ಹೇಳಿದೆ.

ಈ ಬಾರಿ ಸಿಇಟಿ ಪರೀಕ್ಷೆಗೆ 2.11 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 1.4 ಲಕ್ಷ ಪುರುಷ ವಿದ್ಯಾರ್ಥಿಗಳಿದ್ದರೆ, 1.7 ಲಕ್ಷ ಮಹಿಳಾ ಅಭ್ಯರ್ಥಿಗಳಿದ್ದಾರೆ.

ಟೆಕ್ಸಾಸ್‌: ಪ್ರಾಥಮಿಕ ಶಾಲೆಯಲ್ಲಿ ಭೀಕರ ಗುಂಡಿನ ದಾಳಿ : 19 ಮಕ್ಕಳು ಸೇರಿ 21 ಮಂದಿ ಸಾವು – Vishwanews24

 

Leave a Reply