CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ – vishwanews24

Featured, ರಾಷ್ಟ್ರ ನ್ಯೂಸ್

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ

ತಿರುವನಂತಪುರಂ: ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್ (CMRL) ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ಕೇರಳದಾದ್ಯಂತ 10 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಬುಧವಾರ ದಾಳಿ ನಡೆಸಿದೆ.

ಈ ಪ್ರಕರಣದಲ್ಲಿ ಪಿಣರಾಯಿ ವಿಜಯನ್ ಅವರ ಪುತ್ರಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ:

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ – vishwanews24

ಕೊಚ್ಚಿನ್ ಮಿನರಲ್ಸ್ ಮತ್ತು ರೂಟೈಲ್ ಲಿಮಿಟೆಡ್ ಮತ್ತು ವಿಜಯನ್ ಅವರ ಪುತ್ರಿ ಟಿ ವೀಣಾ ಅವರ ಒಡೆತನದ ಎಕ್ಸಲಾಜಿಕ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯ ಭಾಗವಾಗಿ ಈ ದಾಳಿಗಳು ನಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

CMRL ಪ್ರಕರಣದ ಕುರಿತು ED ನಡೆಸುತ್ತಿರುವ ತನಿಖೆಯನ್ನು ರದ್ದುಗೊಳಿಸಲು ಕೇರಳ ಹೈಕೋರ್ಟ್ ನಿರಾಕರಿಸಿದ ಮರು ದಿನವೇ ಈ ಬೆಳವಣಿಗೆ ನಡೆದಿದೆ.

ಕೋಝಿಕ್ಕೋಡ್‌ನಲ್ಲಿ ಮಾಜಿ ಸಚಿವ ಮತ್ತು ಶಾಸಕ ಪಿಎ ಮುಹಮ್ಮದ್ ರಿಯಾಸ್ ಅವರ ನಿವಾಸದ ಮೇಲೆ ಕೂಡ ED ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ – vishwanews24

Leave a Reply