Delhi Election Results : ಮ್ಯಾಜಿಕ್ ನಂಬರ್ ತಲುಪಿದ ಬಿಜೆಪಿ – vishwanews24
Delhi Election Results : ಮ್ಯಾಜಿಕ್ ನಂಬರ್ ತಲುಪಿದ ಬಿಜೆಪಿ
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಕ್ಷಣ ಕ್ಷಣಕ್ಕೂ ಎದೆಬಡಿತ ಹೆಚ್ಚಿಸುತ್ತಿದೆ. ಆರಂಭದಿಂದಲೂ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿಗೆ 16 ಕ್ಷೇತ್ರಗಳಲ್ಲಿ ಆಪ್ ನೇರ ಪೈಪೋಟಿ ನೀಡುತ್ತಿದೆ. ಹೀಗಾಗಿ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, 11 ಗಂಟೆ ವೇಳೆಗೆ ಬಿಜೆಪಿ 41 ಸ್ಥಾನಗಳೊಂದಿಗೆ ಭರ್ಜರಿ ಮುನ್ನಡೆ ಸಾಧಿಸಿದೆ. ಆಡಳಿತಾರೂಢ ಆಪ್ 29 ಸ್ಥಾನಗಳನ್ನು ಪಡೆದು ಹಿನ್ನಡೆಯಲ್ಲಿದ್ದರೆ. ಕಾಂಗ್ರೆಸ್ ಇನ್ನೂ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ದೆಹಲಿಯ 70 ಕ್ಷೇತ್ರಗಳಿಗೆ ಫೆಬ್ರವರಿ 5ರಂದು ನಡೆದ ಚುನಾವಣೆಯಲ್ಲಿ 60.42% ರಷ್ಟು ಮತದಾನ ನಡೆದಿತ್ತು. ಸರಳ ಬಹುಮತಕ್ಕೆ 36 ಸ್ಥಾನಗಳ ಅಗತ್ಯವಿದೆ.
ಇನ್ನು ಮುಂದೆ ತಾಲೂಕು ಪಂಚಾಯಿತಿಯಿಂದ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಹಣ ಬಿಡುಗಡೆ – vishwanews24
2013ರ ಚುನಾವಣೆಯಲ್ಲಿ ಬಿಜೆಪಿ 31, ಆಪ್ 28, ಕಾಂಗ್ರೆಸ್ 08 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ ಇತರರು ಮೂರು ಸ್ಥಾನ ಗೆದ್ದಿದ್ದರು. ಆಪ್‌ಗೆ ಕಾಂಗ್ರೆಸ್ ಬೆಂಬಲ ನೀಡಿದ್ದರಿಂದ ಕೇಜ್ರಿವಾಲ್ ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದರು.
