Featured

Golden Book of World Records ನಲ್ಲಿ ಸ್ಥಾನ‌ ಪಡೆದ ಮಹಿಳೆಯರ ಶಕ್ತಿ ಯೋಜನೆ – vishwanews24

Golden Book of World Records ನಲ್ಲಿ ಸ್ಥಾನ‌ ಪಡೆದ ಮಹಿಳೆಯರ ಶಕ್ತಿ ಯೋಜನೆ

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ‌ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು Golden Book of World Records ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ (2023ರ ಜೂನ್ 11 ರಿಂದ 2025 ರ ಜುಲೈ 25 ಅವಧಿ) 5 ಬಿಲಿಯನ್, 49‌ ಮಿಲಿಯನ್, 426 ಸಾವಿರ, 417 ಮಹಿಳೆಯರು ಅಂದರೆ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೆಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ ಸ್ಥಾನ‌ ಪಡೆದಿದೆ.

ಶಕ್ತಿ ಯೋಜನೆಯು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂದು ಬಲವಾಗಿ ನಂಬಿದ್ದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪ ಮುಖ್ಯಮಂತ್ರಿ‌ ಹಾಗೂ ಕೆಪಿಸಿಸಿ‌ ಅಧ್ಯಕ್ಷ ಡಿ.ಕೆ‌.ಶಿವಕುಮಾರ್. ಈ‌‌ ಚಾರಿತ್ರಿಕ ಸಾಧನೆಯು ಕೆಎಸ್‌ಆರ್‌ಟಿ‌ಸಿ, ಬಿಎಂಟಿಸಿ ವಾ‌ಯವ್ಯ ಕರ್ನಾಟಕ ರಸ್ತೆ ಸಾರಿಗೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ‌ ಆಡಳಿತ ಮಂಡಳಿ ಸಾರಿಗೆ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸಾರಿಗೆ ಇಲಾಖೆಯ ಕಾರ್ಯದರ್ಶಿ, ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಮರ್ಪಿಸಲಾಗಿದೆ.

ನಾನು ಸಾರಿಗೆ ಸಚಿವನಾಗಿ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ‌ ಕೂಡಲೇ ದೇಶದಲ್ಲೇ ಪ್ರಪ್ರಥಮ ಬಾರಿಗೆ ‌ಜಾರಿಗೆ ತಂದ ಗ್ಯಾರಂಟಿ ಯೋಜನೆಯಾದ ಶಕ್ತಿ‌ ಯೋಜನೆಯು‌ ಅತ್ಯಂತ ಸವಾಲಿನಿಂದ‌ ಕೂಡಿತ್ತು. ಕಳೆದ ಐದಾರು ವರ್ಷದಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಹೊಸ‌ ಬಸ್ಸುಗಳ ಸೇರ್ಪಡೆಯಾಗಿಲ್ಲ. ಹೊಸ‌ ನೇಮಕಾತಿ ಆಗಿಲ್ಲ, ಸಾರಿಗೆ ಸಂಸ್ಥೆಗಳು ಸಾಲದ‌ ಸುಳಿಯಲ್ಲಿದ್ದವು. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಒಂದು ತಂಡವಾಗಿ ಕರ್ತವ್ಯ ನಿರ್ವಹಿಸಿ ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಮುನ್ನಡೆಸಿರುವುದು ನನಗೆ ವೈಯಕ್ತಿಕವಾಗಿ ಸಂತೃಪ್ತಿ ತಂದಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಈ ಎರಡು ವರ್ಷಗಳ ಶಕ್ತಿ ಯೋಜನೆಯ ಹಾದಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ‌‌ 5,800 ಹೊಸ ಬಸ್‌ಗಳ ಸೇರ್ಪಡೆ, 10,000 ಹೊಸ ನೇಮಕಾತಿ, ಸಾಲ ಪಾವತಿಸಲು ಸರ್ಕಾರದಿಂದ 2,000 ಕೋಟಿ ಸಹಾಯ, ಸಾರಿಗೆ ಸಂಸ್ಥೆಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಇತರೆ ಅಮೂಲಾಗ್ರ ಬದಲಾವಣೆಗೆ ಕಾರಣವಾಗಿದೆ. ಸಾರಿಗೆ ಸಂಸ್ಥೆಗಳಲ್ಲಿ ಹತ್ತು ಹಲವು ಸವಾಲುಗಳಿದ್ದು, ಎಲ್ಲವನ್ನು ನಾನು ಇತ್ಯರ್ಥ ಪಡಿಸಲು ಸಾಧ್ಯವಿಲ್ಲ. ಆದರೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇನೆ ಮತ್ತು ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಬಿಪಿಎಲ್ ಕಾರ್ಡ್ ಪರಿಷ್ಕರಣೆ: ಮುನಿಯಪ್ಪ

Beyond Free Rides- ಎಂಬ ಹೆಸರಿನಲ್ಲಿ Sustainable Mobility Networkನಿಂದ ದೇಶದ 10 ನಗರಗಳಲ್ಲಿ ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣದ ಬಗ್ಗೆ ನಡೆಸಿರುವ ಅಧ್ಯಯನದ ವರದಿಯು ಬೆಂಗಳೂರಿನಲ್ಲಿ 23% ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ 21% ಮಹಿಳಾ ಉದ್ಯೋಗಿಗಳ ಸಂಖ್ಯೆಯು ಶಕ್ತಿ ಯೋಜನೆಯಿಂದ ಹೆಚ್ಚಳವಾಗಿದೆಯೆಂದು ತಿಳಿಸಿದೆ. ಇದರಿಂದ‌ ರಾಜ್ಯದ ತಲಾ ಆದಾಯವು ಹೆಚ್ಚಳವಾಗಲು ಕಾರಣವಾಗಿದೆ ಎಂದಿದ್ದಾರೆ.

ವಿಶ್ವ ದಾಖಲೆಗೆ ಸೇರ್ಪಡೆಯಾದ ಶಕ್ತಿ ಯೋಜನೆಯಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬರಿಗೂ ಇಂದು ಹೆಮ್ಮೆ ಮತ್ತು ಗೌರವ. ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ‌ ಬೇರೆ ಬೇರೆ ಹೆಸರು, ಬದಲಾವಣೆಗಳೊಂದಿಗೆ ಜಾರಿಗೆ ತರಲಾಗುತ್ತಿರುವುದೇ ನಮ್ಮ ಸರ್ಕಾರದ ಶಕ್ತಿ‌ ಯೋಜನೆಯ ಯಶಸ್ಸಿಗೆ ಹಿಡಿ‌ದ ಕೈಗನ್ನಡಿಯಾಗಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

14 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

15 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

15 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

15 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

17 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

17 hours ago