Featured

Gruha Jyoti Scheme : ಬಾಡಿಗೆದಾರರು ಸೇರಿ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ – Vishwanews24

Gruha Jyoti Scheme : ಬಾಡಿಗೆದಾರರು ಸೇರಿ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಬಾಡಿಗೆದಾರರು ಸೇರಿ ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ (Gruha Jyoti Scheme) ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಉಚಿತ ವಿದ್ಯುತ್ ಗೊಂದಲ ವಿಚಾರಕ್ಕೆ ತೆರೆ ಎಳೆದಿದ್ದಾರೆ.

ಬಾಡಿಗೆದಾರರು ಸೇರಿ ಎಲ್ಲರಿಗೂ 200 ಯೂನಿಟ್ ಉಚಿತ ಉಚಿತ ವಿದ್ಯುತ್ ನೀಡುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದ್ದಾರೆ.

ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ, ಬಾಡಿಗೆ ಮನೆಗಳಲ್ಲಿ ವಾಸಿಸುವವರು ಕೂಡ ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.

ಬಾಡಿಗೆದಾರರಿಗೂ 200 ಯೂನಿಟ್ ವಿದ್ಯುತ್ ಉಚಿತ ನೀಡಲಾಗುತ್ತದೆ, ಬಾಡಿಗೆದಾರರು ಅರ್ಜಿ ಸಲ್ಲಿಸುವಾಗ ಸಂಪೂರ್ಣ ದಾಖಲೆಗಳನ್ನು ನೀಡಬೇಕು. ಮಾಲೀಕನ ಎಷ್ಟು ಬಾಡಿಗೆ ಮನೆ ಇದೆ ಎಂದು ಘೋಷಿಸಬೇಕು ಹಾಗೂ ಮನೆ ಮಾಲೀಕ ಕಡ್ಡಾಯವಾಗಿ ತೆರಿಗೆ ಕಟ್ಟಿರಬೇಕು. ಇಷ್ಟು ಬಾಡಿಗೆ ಮನೆಗಳಿದೆ, ಇಷ್ಟು ಮನೆಗಳಿಗೆ ನಾನು ಟ್ಯಾಕ್ಸ್ ಕಟ್ಟಿದ್ದೇನೆ ಎಂದು ಮಾಹಿತಿ ನೀಡಬೇಕು. ಒಂದು ವೇಳೆ ತಪ್ಪು ಮಾಹಿತಿ ನೀಡಿದ್ರೆ ಈ ಯೋಜನೆ ಅನ್ವಯವಾಗುವುದಿಲ್ಲ . ಎಷ್ಟು ವರ್ಷಗಳಿಂದ ಬಾಡಿಗೆ ಕಟ್ಟುತ್ತಿದ್ದೇವೆ. ವಿದ್ಯುತ್ ಬಿಲ್, ಮನೆ ಬಾಡಿಗೆ, ಕರಾರು ಪತ್ರವಿರಬೇಕು. ಎಷ್ಟು ಮನೆ ಇದೆ ಎಂದು ಘೋಷಿಸಿರಬೇಕು. ಬಾಡಿಗೆಗಾರರಿಗೆ ಉಚಿತ ವಿದ್ಯುತ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ನಾಲ್ಕು ಗ್ಯಾರಂಟಿಗಳಿಗೆ ಅಧಿಕೃತ ಆದೇಶವನ್ನು ಕೂಡ ಹೊರಡಿಸಿದೆ. ಹೀಗೆ ಹೊರಡಿಸಿದಂತ ಅಧಿಕೃತ ಆದೇಶದ ಮಾರ್ಗಸೂಚಿಯಲ್ಲಿ ಹಲವು ಷರತ್ತುಗಳನ್ನು ವಿಧಿಸಲಾಗಿದೆ. ಶಕ್ತಿ ಯೋಜನೆ ಗ್ಯಾರಂಟಿ ಜಾರಿಗೂ ಮುನ್ನ ಹಾಗೂ ತಾತ್ವಿಕ ಒಪ್ಪಿಗೆಯನ್ನು ಸಚಿವ ಸಂಪುಟ ಸಭೆಯಲ್ಲಿ ನೀಡಿದ ನಂತ್ರ, ಜೂನ್ 2ರಂದು ನಡೆದಿದ್ದಂತ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಿದ್ದಂತ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಕೂಡ ನೀಡಲಾಗಿತ್ತು. ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಂತ ಸಿಎಂ, ಮನೆ ಮಾಲೀಕರು ಸೇರಿದಂತೆ ಬಾಡಿಗೆದಾರರಿಗೂ ಉಚಿತ ವಿದ್ಯುತ್ ಯೋಜನೆ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದ್ದರು. ಪ್ರಯೋಜನವನ್ನು ಪಡೆಯಲು ಬಯಸುವ ಗ್ರಾಹಕರು ‘ಸೇವಾ ಸಿಂಧು’ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. 2022-2023ರ ಹಣಕಾಸು ವರ್ಷದಲ್ಲಿ 12 ತಿಂಗಳ ಸರಾಸರಿ ಬಳಕೆ ಮತ್ತು ಶೇಕಡಾ 10ರಷ್ಟು ಹೆಚ್ಚಿನ ವಿದ್ಯುತ್ ಬಳಕೆ 200 ಯೂನಿಟ್ಗಳನ್ನು ಮೀರದಿದ್ದರೆ ಪ್ರಯೋಜನವನ್ನು ಪಡೆಯಲು ಅರ್ಹರಾಗಿರುತ್ತಾರೆ. 200 ಯೂನಿಟ್ ದಾಟಿದ ಗ್ರಾಹಕರು ಸಂಪೂರ್ಣ ವಿದ್ಯುತ್ ಬಿಲ್ ಪಾವತಿಸಬೇಕಾಗುತ್ತದೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago