ಬೆಳಗಾವಿ : ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಆಯ್ಕೆ ಶೀಘ್ರದಲ್ಲೇ ಆರಂಭವಾಗುತ್ತದೆ, ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಾಡಿಗೆದಾರರು ಸೇರಿ ಎಲ್ಲರಿಗೂ ಉಚಿತ ವಿದ್ಯುತ್ ನೀಡಲಾಗುತ್ತದೆ.
ಯಾವುದೇ ವದಂತಿಗೆ ಕಿವಿಗೊಡಬೇಡಿ . ನಾವು ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಯೋಜನೆಯಡಿ ಮನೆಯ ಯಜಮಾನಿ ಖಾತೆಗೆ ಪ್ರತಿ ತಿಂಗಳು 2000 ರೂ. ಜಮೆ ಮಾಡಲಾಗುತ್ತದೆ.ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಕಾಂಗ್ರೆಸ್ ಆಶಾಕಿರಣ ಮೂಡಿಸಿದೆ. ಕಾಂಗ್ರೆಸ್ ಕೊಟ್ಟ ಭರವಸೆಯನ್ನು ಈಡೇರಿಸುತ್ತೇವೆ. ಮನೆ ಮಾಲೀಕರು, ಬಾಡಿಗೆದಾರರಿಗೆ ಯಾವುದೇ ಆತಂಕ ಬೇಡ, ಎಲ್ಲರಿಗೂ ಉಚಿತ ವಿದ್ಯುತ್ ನೀಡುತ್ತೇವೆ ತಿಳಿಸಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಪ್ರತಿಪಕ್ಷಗಳು ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಚುನಾವಣೆ ಸಂದರ್ಭದಲ್ಲಿ ನಾವು ನೀಡಿದ್ದ ಭರವಸೆ ಈಡೇರಿಸಿದ್ದೇವೆ. ಬಿಜೆಪಿಯವರು ಪ್ರತಿಭಟನೆಗೆ ನಾನು ಉತ್ತರ ಕೊಡಲು ಆಗಲ್ಲ. ಬಿಜೆಪಿಯವರು ಎಷ್ಟು ಭರವಸೆ ಕೊಟ್ಟಿದ್ದರು? ಬಿಜೆಪಿಯವರಿಗೆ ರಾಜ್ಯದ ಜನರಿಗೆ ಸರಿಯಾದ ಪಾಠ ಕಲಿಸಿದ್ದಾರೆ. ನಾವು ಕೊಟ್ಟ ಭರವಸೆಯನ್ನು ಖಂಡಿತವಾಗಿ ಈಡೇರಿಸುತ್ತೇವೆ ಎಂದರು.
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…