Featured

HMPV ವೈರಸ್ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ ; ಮುಂಜಾಗ್ರತೆ ಅಗತ್ಯ: ಸಚಿವ ಗುಂಡೂರಾವ್ – vishwanews24

ಭಾರತದಲ್ಲಿ HMPV ವೈರಸ್​ ಇದು ಹೊಸದೇನಲ್ಲ ಬಹಳ ವರ್ಷಗಳಿಂದ ಇದೆ ..

HMPV ವೈರಸ್​​ನಿಂದ ಜೀವಕ್ಕೆ ಯಾವುದೇ ಅಪಾಯ ಇಲ್ಲ ..

ಶೀತ, ಕೆಮ್ಮು, ಕಫ ಇಂತಹ ಆರೋಗ್ಯ ಲಕ್ಷಣ HMPV ಪ್ರಕರಣವಲ್ಲ

ಮಾಸ್ಕ್ ಹಾಕಬೇಕು, ಲಾಕ್ ಡೌನ್ ಮಾಡಬೇಕು ಅಂತಾ ಯಾವುದು ಇಲ್ಲ ..ಎಚ್ಚರಿಕೆಯಿಂದ ಇರಬೇಕು

ಬೆಂಗಳೂರು :  ಬೆಂಗಳೂರಿನಲ್ಲಿ ಹೆಚ್​​ ಎಂಪಿ ವೈರಸ್ (HMPV) ಪತ್ತೆಯಾಗಿದ್ದು, ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹೆಚ್ಎಂಪಿ ವೈರಸ್ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ, ಆದರೆ ಮುಂಜಾಗ್ರತೆ ವಹಿಸಬೇಕು ಎಂದಿದ್ದಾರೆ.

ಆರೋಗ್ಯ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಹೆಚ್​​ಎಂಪಿ ವೈರಸ್​ ಇದು ಹೊಸದೇನಲ್ಲ. ಬಹಳ ವರ್ಷಗಳಿಂದ ಹೆಚ್​​ಎಂಪಿ ವೈರಸ್ ವಿಶ್ವದಾದ್ಯಂತ ಇದೆ. ಹೆಚ್​​ಎಂಪಿ ವೈರಸ್​​ನಿಂದ ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ತಿಳಿಸಿದ್ದಾರೆ.

ಚೀನಾದಲ್ಲಿ ಮ್ಯೂಟೆಟ್​ ಆಗಿದೆಯೋ ಏನೋ ನನಗೆ ಗೊತ್ತಿಲ್ಲ. ಚೀನಾದಲ್ಲಿನ ವೈರಸ್ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಬೇಕು. ದೇಶದಲ್ಲಿ ಹೆಚ್​​ಎಂಪಿ ವೈರಸ್​ ರೀತಿ ನೂರಾರು ವೈರಸ್​ಗಳಿವೆ. 2001ರಲ್ಲಿ ಪ್ರಥಮ ಬಾರಿಗೆ ಹೆಚ್ಎಂಪಿ ವೈರಸ್ ಪತ್ತೆಹಚ್ಚಲಾಗಿದೆ. 8 ತಿಂಗಳ ಮಗು ನಾರ್ಮಲ್ ಆಗಿದೆ. ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಮಗು ಡಿಸ್ಚಾರ್ಜ್​ ಆಗಲಿದೆ ಎಂದು ಹೇಳಿದ್ದಾರೆ.

ಈ ಆರೋಗ್ಯ ಲಕ್ಷಣಗಳು ಹೆಚ್ಎಂಪಿವಿ ಪ್ರಕರಣವಲ್ಲ
ಕರ್ನಾಟಕದಲ್ಲಿ 2 ಲಕ್ಷ 36 ಸಾವಿರ ಐಎಲ್ಐ ಕೇಸ್​ಗಳಿವೆ. ಐಎಲ್ಐ ಕೇಸ್​ನಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ. ಪುದುಚೆರಿ, ಗುಜರಾತ್​ನಲ್ಲಿ ಹೆಚ್ಎಂಪಿ ವೈರಸ್ ಪ್ರಕರಣವಿದೆ. ಕೇಂದ್ರ ಸರ್ಕಾರದ ಮಾಹಿತಿ ಅನ್ವಯ ಐಎಲ್​​ಐ ಕೇಸ್ ಹೆಚ್ಚಾಗಿಲ್ಲ. ಚಳಿಗಾಲದಲ್ಲಿ ಸಹಜವಾಗಿ ಶೀತ, ಕೆಮ್ಮು, ಕಫ ಇದ್ದೇ ಇರುತ್ತೆ. ಆದರೆ ಇಂತಹ ಆರೋಗ್ಯ ಲಕ್ಷಣ ಹೆಚ್ಎಂಪಿವಿ ಪ್ರಕರಣವಲ್ಲ. ರಾಜ್ಯ ಆರೋಗ್ಯ ಇಲಾಖೆಯಲ್ಲಿ ಹಣಕಾಸಿನ ಕೊರತೆಯಿಲ್ಲ. ವೈದ್ಯಕೀಯ ಪರಿಕರ ಖರೀದಿ ಸಹಜವಾಗಿಯೇ ನಡೆಯುತ್ತಿದೆ. ಆಯಾ ಆಸ್ಪತ್ರೆಗಳಿಂದಲೇ ವೈದ್ಯಕೀಯ ಸಾಮಗ್ರಿ ಖರೀದಿ ಮಾಡಲಾಗುವುದು ಎಂದಿದ್ದಾರೆ.

ಕೇಂದ್ರ ಸರ್ಕಾರ ಐಸಿಎಂಆರ್ ಸರ್ವಲೆನ್ಸ್ ಮಾಡುತ್ತಿದೆ. ಐಸಿಎಂಆರ್ ಪ್ರಕಾರ ಶೇ 1ರಷ್ಟು ಹೆಚ್​​​​ಎಂಪಿವಿ ಬರುತ್ತದೆ. ಈ ವೈರಸ್​​ನಿಂದ ಮರಣ ಪ್ರಮಾಣ ಕಡಿಮೆ. ಬಂದ ಬಳಿಕ ಗುಣಮುಖರಾಗುತ್ತಾರೆ. ಹೆಚ್​​​​ಎಂಪಿವಿ ಬಂದ ಎರಡು ಮಕ್ಕಳು ಗುಣಮುಖರಾಗಿದ್ದಾರೆ. ಮಾಸ್ಕ್ ಹಾಕಬೇಕು, ಲಾಕ್ ಡೌನ್ ಮಾಡಬೇಕು ಅಂತಾ ಯಾವುದು ಇಲ್ಲ. ಎಚ್ಚರಿಕೆಯಿಂದ ಇರಬೇಕು ಅಷ್ಟೇ. ಈಗಾಗಲೇ ನಾವು ಕೂಡ ಮಾರ್ಗಸೂಚಿ ಹೇಳಿದ್ದೇವೆ. ಏನು ಮಾಡಬೇಕು, ಏನು ಮಾಡಬಾರದು ಅಂತಾ ಹೇಳಿದ್ದೇವೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

16 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

16 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

17 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

20 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

20 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

20 hours ago