Featured

ICUನಲ್ಲಿ ಮದುವೆಯಾಗಿ ತಾಯಿಯ ಕೊನೆ ಆಸೆ ನೆರವೇರಿಸಿದ ಮಗಳು , ಮದುವೆ ನೋಡಿ ಕೊನೆಯುಸಿರೆಳೆದ ತಾಯಿ – VIshwanews24

ICUನಲ್ಲಿ ಮದುವೆಯಾಗಿ ತಾಯಿಯ ಕೊನೆ ಆಸೆ ನೆರವೇರಿಸಿದ ಮಗಳು , ಮದುವೆ ನೋಡಿ ಕೊನೆಯುಸಿರೆಳೆದ ತಾಯಿ

ಪಾಟ್ನಾ: ತಾಯಿಯ  ಕೊನೆಯ ಆಸೆ ಪೂರೈಸಲು ಮಗಳೊಬ್ಬಳು ತನ್ನ ಮದುವೆಯನ್ನು  ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಆದ ಘಟನೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆ ಪಡೆಯುತ್ತಿದೆ.

ಬಿಹಾರದ ಗಯಾ ನಿವಾಸಿ ಪೂನಂ ಮಗಧ್ ಎಂಬಾಕೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಗಯಾದ ಮ್ಯಾಜಿಸ್ಟ್ರೇಟ್ ಕಾಲೋನಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರಬೇಕು ಎಂದು ವೈದ್ಯರು ಕುಟುಂಬ ಸದಸ್ಯರಿಗೆ ಸೂಚಿಸಿದ್ದರು.

ಆದರೆ ಪೂನಂಗೆ ತನ್ನ ಮಗಳ ಮದುವೆಯನ್ನು ನೋಡಬೇಕು ಎಂಬ ಆಸೆಯಿತ್ತು. ಈ ಹಿನ್ನೆಲೆಯಲ್ಲಿ ಆಕೆ ತನ್ನ ಮಗಳು ಚಾಂದಿನಿ(26) ಬಳಿ ಹೇಳಿಕೊಂಡಿದ್ದಾಳೆ. ತನ್ನ ತಾಯಿಯ ಕೊನೆಯ ಆಸೆಯನ್ನು ಅರಿತ ಚಾಂದಿನಿ ಅದನ್ನು ನೆರವೆರಿಸಲು ಸಿದ್ಧವಾಗಿದ್ದಾಳೆ.

ಚಾಂದಿನಿಗೆ ಈ ಮೊದಲೇ ಸೇಲಂಪುರ ಗ್ರಾಮದ ನಿವಾಸಿ ಸುಮಿತ್ ಗೌರವ್ (28) ನೊಂದಿಗೆ ವಿವಾಹವನ್ನು ನಿಗದಿಪಡಿಸಲಾಗಿತ್ತು. ಅಷ್ಟೇ ಅಲ್ಲದೇ ಇಬ್ಬರ ನಿಶ್ಚಿತಾರ್ಥ ಸಮಾರಂಭಕ್ಕೆ ಡಿ. 26 ರಂದು ದಿನಾಂಕ ನಿಗದಿಯಾಗಿತ್ತು. ಆದರೆ ಪೂನಂ ತನ್ನ ಕೊನೆಯ ಆಸೆಯನ್ನು ಹೇಳಿದಾಗ ಚಾಂದಿನಿ ಆ ವಿಷಯವನ್ನು ಸುಮಿತ್ ಕುಟುಂಬ ಸದಸ್ಯರಿಗೆ ತಿಳಿಸಿದಳು. ಇದಾದ ನಂತರ ಎರಡು ಕುಟುಂಬಗಳ ಪರಸ್ಪರ ಒಪ್ಪಿಗೆ ಮೇರೆಗೆ ಪೂನಂ ಅವರ ಕೊನೆಯ ಆಸೆಯನ್ನು ಈಡೇರಿಸಲು ಆಸ್ಪತ್ರೆಯಲ್ಲಿಯೇ ಮದುವೆಯನ್ನು ಏರ್ಪಡಿಸಲು ನಿರ್ಧರಿಸಿದರು.

ಅದರ ನಂತರ, ಸುಮಿತ್ ಗೌರವ್ ಮತ್ತು ಚಾಂದಿನಿ ಆಸ್ಪತ್ರೆಯ ಐಸಿಯುನಲ್ಲಿ ವಿವಾಹವಾದರು. ಅಲ್ಲಿ ಯಾವುದೇ ಅಲಂಕಾರಗಳಿಲ್ಲದೆ ವಧು-ವರರು ಪರಸ್ಪರ ಹಾರ ಹಾಕಿದರು. ಈ ವೇಳೆ ಎರಡೂ ಕಡೆಯಿಂದ ಎರಡರಿಂದ ನಾಲ್ಕು ಮಂದಿ ಹಾಜರಿದ್ದರು. ಈ ವೇಳೆ ವಧು-ವರರು ತಾಯಿ ಪೂನಂ ಕುಮಾರಿ ವರ್ಮಾ ಅವರಿಂದ ಆಶೀರ್ವಾದ ಪಡೆದರು. ಆದರೆ, ಮದುವೆಯಾದ ಕೆಲವೇ ಗಂಟೆಗಳಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಕೊನೆಯುಸಿರೆಳೆದಿದ್ದಾರೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

51 minutes ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 hour ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

2 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

2 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

2 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

2 hours ago