Featured

IPS ಅಧಿಕಾರಿ ಎಂದು ನಂಬಿಸಿ 12ಕ್ಕೂ ಹೆಚ್ಚು ಮಹಿಳೆಯರಿಗೆ ಮೋಸ ಮಾಡಿ ಲಕ್ಷ ಲಕ್ಷ ಹಣ ದೋಚಿದ ಖದೀಮ – Vishwanews24

IPS ಅಧಿಕಾರಿ ಎಂದು ನಂಬಿಸಿ 12ಕ್ಕೂ ಹೆಚ್ಚು ಮಹಿಳೆಯರಿಗೆ ಮೋಸ ಮಾಡಿ ಲಕ್ಷ ಲಕ್ಷ ಹಣ ದೋಚಿದ ಖದೀಮ

ನವದೆಹಲಿ: ಓದಿದ್ದು 8ನೇ ತರಗತಿ, ಆದರೂ ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು 12ಕ್ಕೂ ಹೆಚ್ಚು ಮಹಿಳೆಯರಿಗೆ  ಮೋಸ ಮಾಡಿ ಲಕ್ಷಾಂತರ ಹಣ ಕೊಳ್ಳೆ ಹೊಡೆದ ಘಟನೆ ದೆಹಲಿಯಲ್ಲಿ ನಡೆದಿದೆ.

ವಿಕಾಸ್ ಗೌತಮ್ ಬಂಧಿತ ಆರೋಪಿ. ಈತ ವಿಕಾಸ್ ಯಾದವ್ ಎಂಬ ಹೆಸರಿನಲ್ಲಿ ಟ್ವಿಟ್ಟರ್, ಇನ್‍ಸ್ಟಾಗ್ರಾಮ್ ಹಾಗೂ ಫೇಸ್‍ಬುಕ್‍ನಲ್ಲಿ ನಕಲಿ ಖಾತೆಯನ್ನು ರಚಿಸಿದ್ದ. ಅಷ್ಟೇ ಅಲ್ಲದೇ ಖಾತೆಯನ್ನು ಅಧಿಕೃತ ಎಂದು ತೊರಿಸಲು ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಂಡಿದ್ದ. ತಾನು ಸರ್ಕಾರಿ ಅಧಿಕಾರಿ ಎಂದು ಹೇಳಲು ಸರ್ಕಾರಿ ಕಾರಿನ ಮುಂದೆ ನಿಂತು ಪೋಸ್ ನೀಡಿದ್ದ.

ಅದಾದ ಬಳಿಕ ಸಂಜಯ್ ಗಾಂಧಿ ಆಸ್ಪತ್ರೆಯ ವೈದ್ಯೆಯೊಬ್ಬಳು ಆನ್‍ಲೈನ್‍ನಲ್ಲಿ ಪರಿಚಯವಾಗಿದ್ದಳು. ಪ್ರತಿದಿನ ಅವಳೊಂದಿಗೆ ಚಾಟ್ ಮಾಡಿ, ಅವಳನ್ನು ತಾನು ಸರ್ಕಾರಿ ಅಧಿಕಾರಿ ಎಂದು ನಂಬಿಸಿದ್ದಾನೆ. ಅಷ್ಟೇ ಅಲ್ಲದೇ ಆತ ವೈದ್ಯೆಯಿಂದ 25,000 ರೂ.ಯನ್ನು ಪಡೆದಿದ್ದಾನೆ. ಆದರೆ ವೈದ್ಯೆಗೆ ಈತ ಮೋಸ ಮಾಡುತ್ತಿದ್ದಾನೆ ಎಂದು ಸಂಶಯ ಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯೆ ಪೊಲೀಸರ ಬಳಿ ಹೋಗಲು ನಿರ್ಧರಿಸಿದ್ದಾಳೆ. ಆದರೆ ವಿಕಾಸ್ ತನಗೆ ರಾಜಕೀಯ ನಾಯಕರ ಸಂಪರ್ಕವಿದೆ ಎಂದು ಬೆದರಿಕೆ ಹಾಕಿದ್ದಾನೆ.

ಅದಕ್ಕೂ ಹೆದರದ ವೈದ್ಯೆ ಪೊಲೀಸರಿಗೆ ದೂರು ನೀಡಿದ್ದಾಳೆ. ಮಹಿಳೆಯ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರಿಗೆ ವಿಕಾಸ್ ಇದೇ ರೀತಿ ಹೇಳಿಕೊಂಡು ಹತ್ತಾರು ಮಹಿಳೆಯರ ಬಳಿ ಲಕ್ಷಾಂತರ ರೂ. ವಂಚಿಸಿದ್ದಾನೆ ಎಂಬ ವಿಷಯ ಬೆಳಕಿಗೆ ಬಂದಿದೆ.

ಘಟನೆಗೆ ಸಂಬಂಧಿಸಿ ವಿಕಾಸ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಈತ ಮಧ್ಯಪ್ರದೇಶದ ಗ್ವಾಲಿಯರ್ ನಿವಾಸಿ. 8ನೇ ತರಗತಿ ಉತ್ತೀರ್ಣರಾದ ನಂತರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕೆಲವು ವೆಲ್ಡಿಂಗ್ ಕೋರ್ಸ್ ಮಾಡಿದ್ದ. ಅದಾದ ಬಳಿಕ ವಿಕಾಸ್ ನಾಗರಿಕ ಸೇವಾ ಪರೀಕ್ಷಾ ಕೋಚಿಂಗ್ ಕೇಂದ್ರಗಳ ಕೇಂದ್ರವಾದ ಉತ್ತರ ದೆಹಲಿಯ ಮುಖರ್ಜಿ ನಗರದ ರೆಸ್ಟೋರೆಂಟ್‍ನಲ್ಲಿಯೂ ಕೆಲಸ ಮಾಡುತ್ತಿದ್ದ. ಆ ಪ್ರದೇಶದಲ್ಲಿ ನಾಗರಿಕ ಸೇವೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ನೋಡಿ, ತಾನೂ ಐಪಿಎಸ್ ಅಧಿಕಾರಿಯಂತೆ ನಟಿಸುವ ಆಲೋಚನೆ ಬಂದಿದೆ ಎಂಬುದನ್ನು ಪೊಲೀಸ್ ವಿಚಾರಣೆ ವೇಳೆ ತಿಳಿಸಿದ್ದಾನೆ

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

10 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

10 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

11 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

11 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

11 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

11 hours ago