ನವದೆಹಲಿ: ಓದಿದ್ದು 8ನೇ ತರಗತಿ, ಆದರೂ ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು 12ಕ್ಕೂ ಹೆಚ್ಚು ಮಹಿಳೆಯರಿಗೆ ಮೋಸ ಮಾಡಿ ಲಕ್ಷಾಂತರ ಹಣ ಕೊಳ್ಳೆ ಹೊಡೆದ ಘಟನೆ ದೆಹಲಿಯಲ್ಲಿ ನಡೆದಿದೆ.
ವಿಕಾಸ್ ಗೌತಮ್ ಬಂಧಿತ ಆರೋಪಿ. ಈತ ವಿಕಾಸ್ ಯಾದವ್ ಎಂಬ ಹೆಸರಿನಲ್ಲಿ ಟ್ವಿಟ್ಟರ್, ಇನ್‍ಸ್ಟಾಗ್ರಾಮ್ ಹಾಗೂ ಫೇಸ್‍ಬುಕ್‍ನಲ್ಲಿ ನಕಲಿ ಖಾತೆಯನ್ನು ರಚಿಸಿದ್ದ. ಅಷ್ಟೇ ಅಲ್ಲದೇ ಖಾತೆಯನ್ನು ಅಧಿಕೃತ ಎಂದು ತೊರಿಸಲು ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಿಕೊಂಡಿದ್ದ. ತಾನು ಸರ್ಕಾರಿ ಅಧಿಕಾರಿ ಎಂದು ಹೇಳಲು ಸರ್ಕಾರಿ ಕಾರಿನ ಮುಂದೆ ನಿಂತು ಪೋಸ್ ನೀಡಿದ್ದ.
ಅದಾದ ಬಳಿಕ ಸಂಜಯ್ ಗಾಂಧಿ ಆಸ್ಪತ್ರೆಯ ವೈದ್ಯೆಯೊಬ್ಬಳು ಆನ್‍ಲೈನ್‍ನಲ್ಲಿ ಪರಿಚಯವಾಗಿದ್ದಳು. ಪ್ರತಿದಿನ ಅವಳೊಂದಿಗೆ ಚಾಟ್ ಮಾಡಿ, ಅವಳನ್ನು ತಾನು ಸರ್ಕಾರಿ ಅಧಿಕಾರಿ ಎಂದು ನಂಬಿಸಿದ್ದಾನೆ. ಅಷ್ಟೇ ಅಲ್ಲದೇ ಆತ ವೈದ್ಯೆಯಿಂದ 25,000 ರೂ.ಯನ್ನು ಪಡೆದಿದ್ದಾನೆ. ಆದರೆ ವೈದ್ಯೆಗೆ ಈತ ಮೋಸ ಮಾಡುತ್ತಿದ್ದಾನೆ ಎಂದು ಸಂಶಯ ಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯೆ ಪೊಲೀಸರ ಬಳಿ ಹೋಗಲು ನಿರ್ಧರಿಸಿದ್ದಾಳೆ. ಆದರೆ ವಿಕಾಸ್ ತನಗೆ ರಾಜಕೀಯ ನಾಯಕರ ಸಂಪರ್ಕವಿದೆ ಎಂದು ಬೆದರಿಕೆ ಹಾಕಿದ್ದಾನೆ.
ಅದಕ್ಕೂ ಹೆದರದ ವೈದ್ಯೆ ಪೊಲೀಸರಿಗೆ ದೂರು ನೀಡಿದ್ದಾಳೆ. ಮಹಿಳೆಯ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರಿಗೆ ವಿಕಾಸ್ ಇದೇ ರೀತಿ ಹೇಳಿಕೊಂಡು ಹತ್ತಾರು ಮಹಿಳೆಯರ ಬಳಿ ಲಕ್ಷಾಂತರ ರೂ. ವಂಚಿಸಿದ್ದಾನೆ ಎಂಬ ವಿಷಯ ಬೆಳಕಿಗೆ ಬಂದಿದೆ.
ಘಟನೆಗೆ ಸಂಬಂಧಿಸಿ ವಿಕಾಸ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಈತ ಮಧ್ಯಪ್ರದೇಶದ ಗ್ವಾಲಿಯರ್ ನಿವಾಸಿ. 8ನೇ ತರಗತಿ ಉತ್ತೀರ್ಣರಾದ ನಂತರ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕೆಲವು ವೆಲ್ಡಿಂಗ್ ಕೋರ್ಸ್ ಮಾಡಿದ್ದ. ಅದಾದ ಬಳಿಕ ವಿಕಾಸ್ ನಾಗರಿಕ ಸೇವಾ ಪರೀಕ್ಷಾ ಕೋಚಿಂಗ್ ಕೇಂದ್ರಗಳ ಕೇಂದ್ರವಾದ ಉತ್ತರ ದೆಹಲಿಯ ಮುಖರ್ಜಿ ನಗರದ ರೆಸ್ಟೋರೆಂಟ್‍ನಲ್ಲಿಯೂ ಕೆಲಸ ಮಾಡುತ್ತಿದ್ದ. ಆ ಪ್ರದೇಶದಲ್ಲಿ ನಾಗರಿಕ ಸೇವೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳನ್ನು ನೋಡಿ, ತಾನೂ ಐಪಿಎಸ್ ಅಧಿಕಾರಿಯಂತೆ ನಟಿಸುವ ಆಲೋಚನೆ ಬಂದಿದೆ ಎಂಬುದನ್ನು ಪೊಲೀಸ್ ವಿಚಾರಣೆ ವೇಳೆ ತಿಳಿಸಿದ್ದಾನೆ
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…