ಶಿವಮೊಗ್ಗ: ಕಳೆದ ಕೆಲವು ದಿನಗಳಿಂದ ನನ್ನ ಕೇಂದ್ರೀಕೃತವಾಗಿ ರಾಜಕೀಯ ಸುದ್ದಿಗಳು ನಡೆಯುತ್ತಿದೆ. ಇದಕ್ಕೆ ಪೂರ್ಣ ವಿರಾಮ ನೀಡಲು ಬಂದಿದ್ದೇನೆ. ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ ಎಂದು ಆಯನೂರು ಮಂಜುನಾಥ್ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ.
ನಾಳೆ ಬೆಂಗಳೂರಿನ ಕಾಂಗ್ರೆಸ್ ಕಛೇರಿಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗುತ್ತಿದ್ದೇನೆ ಎಂದರು.
ಪಕ್ಷದ ಎಲ್ಲಾ ಮುಖಂಡರ ಸಹಮತಿ ನೀಡಿ ಸಹಕಾರ ನೀಡುವ ಭರವಸೆ ನೀಡಿದ್ದಾರೆ.ಕಳೆದ ವಿಧಾನ ಸಭಾ ಚುನಾವಣೆ ವೇಳೆಗೆ ಕಾಂಗ್ರೆಸ್ ಸೇರುವ ಅವಕಾಶ ಒದಗಿ ಬಂದಿತ್ತು.ಆದರೆ ಸೇರ್ಪಡೆಯಾಗಿರಲಿಲ್ಲ ಎಂದರು.
ಮುಂಬರುವ ತಾಲ್ಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಮತ್ತು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ತೀರ್ಮಾನಕ್ಕೆ ಬಂದಿದ್ದೇವೆ. ಕಾಂಗ್ರೆಸ್ ಪಕ್ಷದ ಗೆಲುವಿಗೆ ನಮ್ಮಶಕ್ತಿಯನ್ನು ಧಾರೆ ಎರೆಯುತ್ತೇವೆ ಎಂದರು.
ರಾಜಕಾರಣವೇ ಒಂದು ಅವಕಾಶ.ಕಾಂಗ್ರೆಸ್ ಕೊನೆಯ ಬಸ್ ಸ್ಟಾಂಪ್ ಅಂತ ಕಾಣುತ್ತದೆ.ಬಿಜೆಪಿಯಿಂದ ಆಹ್ವಾನ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಆತಂಕಕ್ಕೆ ಒಳಗಾದವರು ನನ್ನನ್ನು ವಿರೋಧಿಸುತ್ತಿದ್ದಾರೆ.ದೊಡ್ಡ ಪಕ್ಷದಲ್ಲಿ ವಿರೋಧ ಇರುವುದು ಸಹಜ. ಕಾಂಗ್ರೆಸ್ ನ ಬಹುತೇಕ ಮುಖಂಡರು ಸ್ವಾಗತಿಸಿದ್ದಾರೆ ಎಂದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…