Karnataka Budget : ‘ಕಿಸಾನ್ ಕ್ರೆಡಿಟ್ ಕಾರ್ಡ್’ ಹೊಂದಿರುವ ರೈತರಿಗೆ ಹೆಚ್ಚುವರಿಯಾಗಿ ’10 ಸಾವಿರ ರೂ ಸಹಾಯಧನ’ ನೀಡಿಕೆ – Vishwanews24
Karnataka Budget : ‘ಕಿಸಾನ್ ಕ್ರೆಡಿಟ್ ಕಾರ್ಡ್’ ಹೊಂದಿರುವ ರೈತರಿಗೆ ಹೆಚ್ಚುವರಿಯಾಗಿ ’10 ಸಾವಿರ ರೂ ಸಹಾಯಧನ’ ನೀಡಿಕೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಡಿಸುತ್ತಿರುವಂತ ಬಜೆಟ್ ನಲ್ಲಿ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ರೈತರಿಗೆ ನೀಡುತ್ತಿರುವಂತ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸುತ್ತಿರೋದಾಗಿ ಘೋಷಿಸಿದ್ದಾರೆ.
ಈ ವರ್ಷದಿಂದ ರೈತರಿಗೆ ನೀಡುವ ಬಡ್ಡಿರಹಿತ ಅಲ್ಪಾವಧಿ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಗಳಿಗೆ ಹೆಚ್ಚಿಸಲಾಗುವುದು. ಇದರಿಂದ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲು ರೈತರಿಗೆ ಸುಲಭವಾಗಲಿದೆ ಎಂದರು.
ಅಗತ್ಯಕ್ಕೆ ತಕ್ಕಂತೆ ಸಾಲ ಸೌಲಭ್ಯ ದೊರಕಿಸಿದಂತೆ ಸಾಲ ಹೆಚ್ಚಳದಿಂದ ರೈತರಿಗೆ ಆಗಲಿದೆ. ಈ ವರ್ಷ 30 ಲಕ್ಷಕ್ಕಿಂತ ಹೆಚ್ಚಿನ ತರಿಗೆ 25,000 ಕೋಟಿ ರೂಗಳಷ್ಟು ಸಾಲ ವಿತರಿಸಲಾಗುವುದು ಎಂದರು.
Karnataka Budget 2023 : ಬೆಂಗಳೂರು ಟ್ರಾಫಿಕ್ ಕಂಟ್ರೋಲ್ ಗೆ 150 ಕೋಟಿ ರೂ. ಅನುದಾನ – Vishwanews24
ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ಭೂ ಸಿರಿ ಎಂಬ ನೂತನ ಯೋಜನೆಯಡಿ 2023-24ನೇ ಸಾಲಿನಿಂದ 10 ಸಾವಿರ ರೂ ಗಳ ಹೆಚ್ಚುವರಿ ಸಹಾಯ ಧನ ನೀಡಲು ನಿರ್ಧರಿಸಿದ್ದೇವೆ. ತುರ್ತು ಸಂದರ್ಭಗಳಲ್ಲಿ ರೈತರಿಗೆ ಬೀಜ, ರಸಗೊಬ್ಬರ, ಕ್ರಿಮಿನಾಶಕ ಮುಂತಾದ ಪರಿಕರಗಳ್ನು ಖರೀದಿಸಲು ಇದರಿಂದ ಅನುಕೂಲವಾಗಲಿದೆ. ಈ ಮೊತ್ತದಲ್ಲಿ ರಾಜ್ಯ ಸರ್ಕಾರದ 2,500 ರೂ ಹಾಗೂ ನಬಾರ್ಡ್ ನ 7,500 ರೂ ಸೇರಿದ್ದು, ರಾಜ್ಯದ ಸುಮಾರು 50 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದರು.
