Karnataka Budget : ಸಿಎಂ ಬೊಮ್ಮಾಯಿ ಬಜೆಟ್ ನಲ್ಲಿ ಕೆಲವೊಂದು ಮಹತ್ವದ ಯೋಜನೆ ಇಲ್ಲಿದೆ ಮಾಹಿತಿ – Vishwanews24

Featured, ರಾಜ್ಯ ನ್ಯೂಸ್

Karnataka Budget  : ಚರ್ಮಗಂಟು ರೋಗ ತಡೆಗಟ್ಟಲು 1 ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ..

ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್ : `ಹಳ್ಳಿ ಮುತ್ತು ಯೋಜನೆ’ ಜಾರಿ..

ರಾಜ್ಯದ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ಪ್ರತಿ ತಿಂಗಳು 500 ರೂ ಸಹಾಯಧನ..

ರಾಜ್ಯದ ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಣೆ : ಸಿಎಂ ಬೊಮ್ಮಾಯಿ ಘೋಷಣೆ..

ಪರಿಶಿಷ್ಟ ಜಾತಿ, ಪಂಗಡದವರಿಗೆ ಗುಡ್ ನ್ಯೂಸ್: ವಸತಿ ಯೋಜನೆಗಳಲ್ಲಿ ಘಟಕ ಸಹಾಯಧನ 1.75 ಲಕ್ಷದಿಂದ 2 ಲಕ್ಷಕ್ಕೆ ಹೆಚ್ಚಳ..

ಮಠ, ಮಂದಿರಗಳ ಅಭಿವೃದ್ಧಿಗೆ 1,000 ಕೋಟಿ ಮೀಸಲು..

SC-ST’ ಸಮುದಾಯದ ಯುವಕರಿಗೆ ಸ್ವಯಂಉದ್ಯೋಗಕ್ಕಾಗಿ ವಾಹನ ಖರೀದಿಸಲು 2 ಲಕ್ಷ ರೂ.ವರೆಗೆ ಸಹಾಯಧನ..

ಬೆಂಗಳೂರು: 2023-24 ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್‌ಯನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದಾರೆ. ಹೈನುಗಾರಿಕೆ, ಪಶುಸಂಗೋಪನೆಗೆ ಸಂಬಂಧಿಸಿದಂತೆ ಕೆಲವೊಂದು ಮಹತ್ವದ ಯೋಜನೆಗಳನ್ನು ಕೈಗೊಂಡಿದ್ದಾರೆ.

ಇದೀಗ ಜಾನುವಾರುಗಳಿಗೆ ಹೆಚ್ಚು ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದೆ.

ಹೀಗಾಗಿ ಇದನ್ನ ತಡೆಗಟ್ಟುವ ಸಲುವಾಗಿ 1 ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ ನೀಡಲಾಗುವುದು ಎಂದರು. ಈ ಸೋಂಕಿನಿಂದಾಗಿ ಮರಣ ಹೊಂದಿದ ರಾಸುಗಳ ಮಾಲೀಕರಿಗೆ ಪರಿಹಾರವಾಗಿ 55 ಕೋಟಿ ರೂ. ಮಂಜೂರು ಮಾಡಲಾಗಿದೆ.

ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್ : `ಹಳ್ಳಿ ಮುತ್ತು ಯೋಜನೆ’ ಜಾರಿ

ಗ್ರಾಮೀಣ ವಿದ್ಯಾರ್ಥಿಗಳಿಗೆ ಹಳ್ಳಿ ಮುತ್ತು ಯೋಜನೆ, ಗ್ರಾಮೀಣಾ ಭಾಗದ ವಿದ್ಯಾರ್ಥಿಗಳಿಗಾಗಿ ಹಳ್ಳಿ ಮುತ್ತು ಯೋಜನೆ, ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸಹಾಯ, ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನೆರವು ನೀಡಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಂಪೂರ್ಣ ಶುಲ್ಕ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ಪ್ರತಿ ತಿಂಗಳು 500 ರೂ ಸಹಾಯಧನ

ಕುಟುಂಬ ನಿರ್ವಹಣೆಯೊಂದಿಗೆ ಮನೆಯ ಆರ್ಥಿಕ ಸುಧಾರಣೆಗಾಗಿ ಶ್ರಮಿಸುವ ಮಹಿಳಾ ಕೃಷಿ ಕಾರಮಿಕರ ಕುರಿತು ನಮ್ಮ ಸರ್ಕಾರ ಹೊಂದಿರುವ ಕಾಳಜಿಯ ಪ್ರತೀಕವಾಗಿ, ಶ್ರಮ ಶಕ್ತಿ ಎಂಬ ಹೊಸ ಯೋಜನೆಯನ್ನು ಜಾರಿಗೆ ತಲಾಗುವುದು. ಈ ಯೋಜನೆಯಡಿ ರಾಜ್ಯ ಸರ್ಕಾರವು ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ ಗಳ ಸಹಾಯ ಧನವನ್ನು ಡಿಬಿಟಿ ಮೂಲಕ ನೀಡಲಾಗುತ್ತದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

Karnataka Budget : ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ  ಗೌರವಧನ 1 ಸಾವಿರ ರೂ. ಹೆಚ್ಚಳ – Vishwanews24

ರಾಜ್ಯದ ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಣೆ : ಸಿಎಂ ಬೊಮ್ಮಾಯಿ ಘೋಷಣೆ

ರಾಜ್ಯದ 10.32 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯಡಿ 725 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. 2022-23ನೇ ಸಾಲಿನಲ್ಲಿ ಈ ಸೌಲಭ್ಯವನ್ನು ಭೂರಹಿತ ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರು ಹಾಗೂ ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿಸ್ತರಿಸಲಾಗಿದ್ದು, ಹೆಚ್ಚುವರಿಯಾಗಿ 3 ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯನ್ನು ರಾಜ್ಯದ ಸಿಂಪಿಗರ ಮಕ್ಕಳಿಗೂ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿ, ಪಂಗಡದವರಿಗೆ ಗುಡ್ ನ್ಯೂಸ್: ವಸತಿ ಯೋಜನೆಗಳಲ್ಲಿ ಘಟಕ ಸಹಾಯಧನ 1.75 ಲಕ್ಷದಿಂದ 2 ಲಕ್ಷಕ್ಕೆ ಹೆಚ್ಚಳ

ಗ್ರಾಮೀಣ ಪ್ರದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಸತಿ ಯೋಜನೆಗಳಲ್ಲಿ ಘಟಕ ಸಹಾಯಧನ 1.75 ಲಕ್ಷದಿಂದ 2 ಲಕ್ಷ ರೂಗಳಿಗೆ ಹೆಚ್ಚಳ ಮಾಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಠ, ಮಂದಿರಗಳ ಅಭಿವೃದ್ಧಿಗೆ 1,000 ಕೋಟಿ ಮೀಸಲು

2023-24 ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್‌ಯನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದಾರೆ. ಮಠ ಮತ್ತು ಮಂದಿರಗಳಿಗೆ ಬಜೆಟ್‌ ನಲ್ಲಿ ಹೆಚ್ಚಿನ ಅಭಿವೃದ್ಧಿ ಕೈಗೊಳ್ಳಲಾಗಿದೆ. ಈಗಾಗಲೇ ಮಠ-ಮಂದಿರಗಳ ಅಭಿವೃದ್ಧಿಗೆ ಬಜೆಟ್​ನಲ್ಲಿ 1,000 ಕೋಟಿ ರೂ. ಹಣ ಮೀಸಲಿರಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

SC-ST’ ಸಮುದಾಯದ ಯುವಕರಿಗೆ ಸ್ವಯಂಉದ್ಯೋಗಕ್ಕಾಗಿ ವಾಹನ ಖರೀದಿಸಲು 2 ಲಕ್ಷ ರೂ.ವರೆಗೆ ಸಹಾಯಧನ

ಮೊದಲ ಬಾರಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರು ಸ್ವಯಂಉದ್ಯೋಗ ಕೈಗೊಳ್ಳಲು ವಿದ್ಯುತ್‌ ಚಾಲಿತ ತ್ರಿಚಕ್ರ ಸರಕು ವಾಹನ ಖರೀದಿಗೆ 50 ಸಾವಿರ ರೂ. ಧನ ಸಹಾಯ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಮುಂದುವರೆಸಿ ಬಾಬು ಜಗಜೀವನರಾಮ್ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಎಲೆಕ್ರಿಕ್ ತಿಚಕ್ರ ಅಥವಾ ನಾಲ್ಕು ಚಕ್ರದ ಸರಕು ವಾಹನಗಳನ್ನು ಖರೀದಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ಫಲಾನುಭವಿಗಳಿಗೆ ಶೇ.50 ರಷ್ಟು 2 ಲಕ್ಷ ರೂ. ವರೆಗೂ ಸಹಾಯಧನವನ್ನು ನೀಡಲಾಗುವುದು, ಇದಕ್ಕಾಗಿ 400 ಕೋಟಿ ರೂ. ವೆಚ್ಚವಾಗಲಿದೆ ಎಂದರು.

ಕಾಪು : ಎಲ್ಲೂರು ವಿಶ್ವೇಶ್ವರ ದೇಗುಲದ ಸಂಪ್ರದಾಯ ಆಚರಣೆ ಬಗ್ಗೆ ಶೀಘ್ರ ಸೂಕ್ತ ತೀರ್ಮಾನ : ಕೋಟ ಶ್ರೀನಿವಾಸ ಪೂಜಾರಿ – Vishwanews24

 

Leave a Reply