Featured

Karnataka Budget – ಕರಾವಳಿ ಮೀನುಗಾರಿಕೆ ಕ್ಷೇತ್ರಕ್ಕೆ ಬಜೆಟ್​​ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ ಸಿಎಂ ಸಿದ್ದರಾಮಯ್ಯ – Vishwanews24

Karnataka Budget – ಕರಾವಳಿ ಮೀನುಗಾರಿಕೆ ಕ್ಷೇತ್ರಕ್ಕೆ ಬಜೆಟ್​​ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೀನುಗಾರಿಕೆ ಕ್ಷೇತ್ರಕ್ಕೆ ಬಜೆಟ್​​ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ್ದಾರೆ.

ಮತ್ಸ್ಯ ಆಶಾಕಿರಣ ಯೋಜನೆಯಡಿ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಕರಾವಳಿಯ ಮೀನುಗಾರರಿಗೆ ನೀಡುತ್ತಿರುವ ಪರಿಹಾರ ಮೊತ್ತದ ರಾಜ್ಯದ ಪಾಲನ್ನು 1,500 ರೂ.ಗಳಿಂದ 3,000 ರೂ.ಗಳಿಗೆ ಹೆಚ್ಚಿಸಲಾಗುವುದು. ಸಮುದ್ರ ಮೀನುಗಾರಿಕೆಗೆ ತೆರಳಿದಾಗ ಅಪಘಾತ ಅಥವಾ ಅನಾರೋಗ್ಯಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ರಾಜ್ಯದಲ್ಲಿ ಪ್ರಪ್ರಥಮ ಸಮುದ್ರ ಆಂಬುಲೆನ್ಸ್ ಅನ್ನು 7 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುವುದು.

2024-25ನೇ ಸಾಲಿನಲ್ಲಿ 10,000 ವಸತಿರಹಿತ ಮೀನುಗಾರರಿಗೆ ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿಯಲ್ಲಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡಲಾಗುವುದು ಎಂದರು.

ರಾಜ್ಯದಲ್ಲಿನ 16 ಮೀನು ಮರಿ ಉನ್ನತೀಕರಣವನ್ನು ನಬಾರ್ಡ್ ಉತ್ಪಾದನಾ ಕೇಂದ್ರಗಳ ಸಹಯೋಗದೊಂದಿಗೆ 20 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಚಿತ್ರದುರ್ಗ, ಹೊಳಲ್ಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳ ಗಣಿಬಾಧಿತ ಪ್ರದೇಶದಲ್ಲಿ ಮೀನುಗಾರಿಕೆಯನ್ನು ಕೈಗೊಳ್ಳಲು 6 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದಿದ್ದಾರೆ.

ಭದ್ರಾವತಿಯಲ್ಲಿ ಹೈಟೆಕ್​ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

6 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

6 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

7 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

7 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

7 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

8 hours ago