ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೀನುಗಾರಿಕೆ ಕ್ಷೇತ್ರಕ್ಕೆ ಬಜೆಟ್ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ್ದಾರೆ.
ಮತ್ಸ್ಯ ಆಶಾಕಿರಣ ಯೋಜನೆಯಡಿ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಕರಾವಳಿಯ ಮೀನುಗಾರರಿಗೆ ನೀಡುತ್ತಿರುವ ಪರಿಹಾರ ಮೊತ್ತದ ರಾಜ್ಯದ ಪಾಲನ್ನು 1,500 ರೂ.ಗಳಿಂದ 3,000 ರೂ.ಗಳಿಗೆ ಹೆಚ್ಚಿಸಲಾಗುವುದು. ಸಮುದ್ರ ಮೀನುಗಾರಿಕೆಗೆ ತೆರಳಿದಾಗ ಅಪಘಾತ ಅಥವಾ ಅನಾರೋಗ್ಯಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ರಾಜ್ಯದಲ್ಲಿ ಪ್ರಪ್ರಥಮ ಸಮುದ್ರ ಆಂಬುಲೆನ್ಸ್ ಅನ್ನು 7 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುವುದು.
2024-25ನೇ ಸಾಲಿನಲ್ಲಿ 10,000 ವಸತಿರಹಿತ ಮೀನುಗಾರರಿಗೆ ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿಯಲ್ಲಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡಲಾಗುವುದು ಎಂದರು.
ರಾಜ್ಯದಲ್ಲಿನ 16 ಮೀನು ಮರಿ ಉನ್ನತೀಕರಣವನ್ನು ನಬಾರ್ಡ್ ಉತ್ಪಾದನಾ ಕೇಂದ್ರಗಳ ಸಹಯೋಗದೊಂದಿಗೆ 20 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಚಿತ್ರದುರ್ಗ, ಹೊಳಲ್ಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳ ಗಣಿಬಾಧಿತ ಪ್ರದೇಶದಲ್ಲಿ ಮೀನುಗಾರಿಕೆಯನ್ನು ಕೈಗೊಳ್ಳಲು 6 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದಿದ್ದಾರೆ.
ಭದ್ರಾವತಿಯಲ್ಲಿ ಹೈಟೆಕ್ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…