ಬೆಂಗಳೂರು,: 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 15ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 15ನೇ ಆಯವ್ಯಯ ಮಂಡನೆ ಮಾಡುತ್ತಿದ್ದೇನೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಸಾಮಾಜಿಕ ಸಮಾನತೆಯ ಉದ್ದೇಶದೊಂದಿಗೆ ಈ ಬಜೆಟ್ ಮಂಡನೆ ಮಾಡುತ್ತಿದ್ದೇನೆ ಎಂದ ಅವರು ‘ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ’ ಎಂಬ ಡಾ.ರಾಜ್ ಕುಮಾರ್ ಹಾಡಿನ ಸಾಲು ಉಲ್ಲೇಖಿಸಿದರು.
ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದ ಅವರು, ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆಯನ್ನು ಉಲ್ಲೇಖಿಸಿ “ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ. ಗ್ಯಾರಂಟಿ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ತಿರುಗಿ ನೋಡುತ್ತಿವೆ. ಹಲವು ದೇಶಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು ನಮ್ಮ ಯೋಜನೆಗಳ ಬಗ್ಗೆ ಅಧ್ಯಯನ ನಡೆಸಿವೆ” ಎಂದು ಹೇಳಿದರು.
ಈ 5 ಗ್ಯಾರಂಟಿ ಜಾರಿಯಿಂದ ಇಡೀ ಜಗತ್ತು ರಾಜ್ಯದತ್ತ ನೋಡುತ್ತಿದೆ. ಶಕ್ತಿ ಯೋಜನೆಯಿಂದ ಮಹಿಳೆಯರು ಸಂತಸಗೊಂಡಿದ್ದಾರೆ. 5 ಗ್ಯಾರಂಟಿ ಜಾರಿಯಿಂದ ಸರ್ಕಾರದಲ್ಲಿ ಹಣವಿಲ್ಲ ಎಂದು ಸುಳ್ಳು ಹೇಳ್ತಿದ್ದಾರೆ. ಕೇಂದ್ರ ಸರ್ಕಾರ ಮಾಡದ್ದನ್ನು ನಾವು ಮಾಡಿದ್ದೇವೆ. ಬಿಟ್ಟಿ ಗ್ಯಾರಂಟಿ, ದಿವಾಳಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಎಲ್ಲರನ್ನೂ ಒಳಗೊಂಡಂತೆ ರಾಜ್ಯ ಅಭಿವೃದ್ಧಿ ಮಾಡುತ್ತೇವೆ ತೆರಿಗೆ ಸಂಗ್ರಹದಲ್ಲಿ ರಾಜ್ಯವು ಮುಂಚೂಣಿಯಲ್ಲಿದ್ದು, ಗ್ಯಾರಂಟಿ ಯೋಜನೆಗಳಿಂದ ಜನರ ಆದಾಯ ಹೆಚ್ಚಳವಾಗಿದೆ. ಇದರ ಪರಿಣಾಮ ತೆರಿಗೆ ಸಂಗ್ರಹ ಹೆಚ್ಚಾಗಲಿದೆ ಎಂದು ಹೇಳಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…