ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ಮೆಚ್ಚುಗೆಯ ನೋಟ ಬೀರಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ತಮ್ಮ ಬಜೆಟ್ ಭಾಷಣದಲ್ಲಿ ಸಿಎಂ, ಅನ್ನಭಾಗ್ಯ ಯೋಜನೆಗಳ ಮೂಲಕ ಕೋಟ್ಯಂತರ ಜನರ ಕೈಗೆ ಹಂಚಿಕೆ ಮಾಡಲಾಗುತ್ತಿದೆ. ಈ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 50,000 ದಿಂದ 55,000 ರೂ. ಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಸಮಯ ಕಳೆದಂತೆ ಗ್ಯಾರಂಟಿ ಯೋಜನೆಗಳ ಆರ್ಥಿಕ ಮತ್ತು ಸಾಮಾಜಿಕ ಅನುಕೂಲಗಳು ಇನ್ನಷ್ಟು ಸ್ಪಷ್ಟವಾಗಿ ಗೋಚರಿಸಲಿವೆ. ಹಲವು ದೇಶಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ನಮ್ಮ ಕೆಲಸದ ಅಧ್ಯಯನ ನಡೆಸಿ, ಶ್ಲಾಘಿಸಿವೆ. ಆದರೆ ಗ್ಯಾರಂಟಿ ಯೋಜನೆಗಳ ಮೇಲಿನ ನನ್ನ ನಂಬಿಕೆ ದೃಢವಾಗಲು ಕೇವಲ ಈ ಅಧ್ಯಯನಗಳಷ್ಟೇ ಕಾರಣವಲ್ಲ.
ಬಸ್ ಹತ್ತುವ ಮುನ್ನ ತಲೆಬಾಗಿ ನಮಸ್ಕರಿಸಿದ ಮಹಿಳೆಯ ಮುಖದಲ್ಲಿದ್ದ ಸಂತೋಷ, ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಲಕ್ಷಾಂತರ ಮಹಿಳೆಯರ ಪ್ರಾರ್ಥನೆ, ಯುವನಿಧಿಯಡಿ ನೆರವು ಪಡೆದ ನಿರುದ್ಯೋಗಿ ಯುವಕನ ಆನಂದಭಾಷ್ಪ- ಇವು ಗ್ಯಾರಂಟಿ ಯೋಜನೆಗಳ ಮೇಲಿನ ನನ್ನ ನಂಬಿಕೆಯನ್ನು ಇನ್ನಷ್ಟು ಬಲಪಡಿಸಿದೆ.ಎಂದು ತಿಳಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…