Featured

Karnataka Budget – ಗ್ಯಾರಂಟಿ ಯೋಜನೆಯಿಂದ ಪ್ರತಿ ಕುಟುಂಬಕ್ಕೆ 50 ಸಾವಿರ ಸಿಗುತ್ತಿದೆ : ಸಿದ್ದರಾಮಯ್ಯ – Vishwanews24

Karnataka Budget : ಗ್ಯಾರಂಟಿ ಯೋಜನೆಯಿಂದ ಪ್ರತಿ ಕುಟುಂಬಕ್ಕೆ 50 ಸಾವಿರ ಸಿಗುತ್ತಿದೆ : ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ಮೆಚ್ಚುಗೆಯ ನೋಟ ಬೀರಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್‌ ಭಾಷಣದಲ್ಲಿ ಹೇಳಿದ್ದಾರೆ.

ತಮ್ಮ ಬಜೆಟ್‌ ಭಾಷಣದಲ್ಲಿ ಸಿಎಂ, ಅನ್ನಭಾಗ್ಯ ಯೋಜನೆಗಳ ಮೂಲಕ ಕೋಟ್ಯಂತರ ಜನರ ಕೈಗೆ ಹಂಚಿಕೆ ಮಾಡಲಾಗುತ್ತಿದೆ. ಈ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 50,000 ದಿಂದ 55,000 ರೂ. ಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಸಮಯ ಕಳೆದಂತೆ ಗ್ಯಾರಂಟಿ ಯೋಜನೆಗಳ ಆರ್ಥಿಕ ಮತ್ತು ಸಾಮಾಜಿಕ ಅನುಕೂಲಗಳು ಇನ್ನಷ್ಟು ಸ್ಪಷ್ಟವಾಗಿ ಗೋಚರಿಸಲಿವೆ. ಹಲವು ದೇಶಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ನಮ್ಮ ಕೆಲಸದ ಅಧ್ಯಯನ ನಡೆಸಿ, ಶ್ಲಾಘಿಸಿವೆ. ಆದರೆ ಗ್ಯಾರಂಟಿ ಯೋಜನೆಗಳ ಮೇಲಿನ ನನ್ನ ನಂಬಿಕೆ ದೃಢವಾಗಲು ಕೇವಲ ಈ ಅಧ್ಯಯನಗಳಷ್ಟೇ ಕಾರಣವಲ್ಲ.

ಬಸ್ ಹತ್ತುವ ಮುನ್ನ ತಲೆಬಾಗಿ ನಮಸ್ಕರಿಸಿದ ಮಹಿಳೆಯ ಮುಖದಲ್ಲಿದ್ದ ಸಂತೋಷ, ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಲಕ್ಷಾಂತರ ಮಹಿಳೆಯರ ಪ್ರಾರ್ಥನೆ, ಯುವನಿಧಿಯಡಿ ನೆರವು ಪಡೆದ ನಿರುದ್ಯೋಗಿ ಯುವಕನ ಆನಂದಭಾಷ್ಪ- ಇವು ಗ್ಯಾರಂಟಿ ಯೋಜನೆಗಳ ಮೇಲಿನ ನನ್ನ ನಂಬಿಕೆಯನ್ನು ಇನ್ನಷ್ಟು ಬಲಪಡಿಸಿದೆ.ಎಂದು ತಿಳಿಸಿದರು.

 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

10 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

11 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

11 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

12 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

12 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

12 hours ago