Karnataka Budget :  ನಿರುದ್ಯೋಗಿಗಳಿಗೆ ‘ಯುವ ಸ್ನೇಹಿ’ ಯೋಜನೆ -2000 ಆರ್ಥಿಕ ನೆರೆವು – Vishwanews24

Featured, ರಾಜ್ಯ ನ್ಯೂಸ್

Karnataka Budget :  ನಿರುದ್ಯೋಗಿಗಳಿಗೆ ‘ಯುವ ಸ್ನೇಹಿ’ ಯೋಜನೆ -2000 ಆರ್ಥಿಕ ನೆರೆವು

ವಿದೇಶದಲ್ಲಿ ವ್ಯಾಸಂಗ ಮಾಡಲು ಇಚ್ಚಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ  20 ಲಕ್ಷ ರೂವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ

ಬೆಂಗಳೂರು: ಪದವಿ ಶಿಕ್ಷಣವನ್ನು ಮುಗಿಸಿ ಮೂರು ವರ್ಷದ ನಂತರವೂ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ ಸ್ಮರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹ ಈಡಲು ‘ಯುವ ಸ್ನೇಹಿ’ ಎಂಬ ಹೊಸ ಯೋಜನೆಯಡಿ ತಲಾ 2000 ರೂ.ಗಳ ಒಂದು ಬಾರಿಯ ಆರ್ಥಿಕ ನೆರೆವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಬದುಕುವ ದಾರಿ ಎಂಬ ಹೊಸ ಯೋಜನೆಯಡಿ ಶಾಲಾ ಶಿಕ್ಷಣದ ನಂತರ ವಿವಿಧ ಕಾರಣಗಳಿಂದ ವಿದ್ಯಾಭ್ಯಾಸ ಮುಂದುವರೆಸಲು ಸಾಧ್ಯವಾಗದೇ ಇರುವ ಯುವಕರಿಗೆ ಐಟಿಐಗಳಲಿ 3 ತಿಂಗಳ ಅವಧಿಯ ವೃತ್ತಿಪರ ಸರ್ಟಿಫಿಕೇಟ್ ತರಬೇತಿ ಪಡೆಯಲು ಮಾಸಿಕ 1,500 ರೂ.ಗಳ ಶಿಷ್ಯವೇತನವನ್ನು ನೀಡಲಾಗುವುದು. ಈ ತರಬೇತಿ ಪೂರ್ಣಗೊಳಿಸಿರುವವರಿಗೆ Apprenticeship ಕಾರ್ಯಕ್ರಮದಡಿ 3ಗಳ ತಿಂಗಳಿಗೆ ಮಾಸಿಕ 1500 ರೂ. ಶಿಶಿಕ್ಷು ಭತ್ಯೆಯನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

https://www.vishwanews24.com/%e0%b2%95%e0%b2%be%e0%b2%aa%e0%b3%81-%e0%b2%8e%e0%b2%b2%e0%b3%8d%e0%b2%b2%e0%b3%82%e0%b2%b0%e0%b3%81-%e0%b2%b5%e0%b2%bf%e0%b2%b6%e0%b3%8d%e0%b2%b5%e0%b3%87%e0%b2%b6%e0%b3%8d%e0%b2%b5%e0%b2%b

ವಿದೇಶದಲ್ಲಿ ವ್ಯಾಸಂಗ ಮಾಡಲು ಇಚ್ಚಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ  20 ಲಕ್ಷ ರೂವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ

ಅಲ್ಪ ಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳ ಅಭ್ಯುದಯಕ್ಕೆ ಸರ್ಕಾರ ಆದ್ಯತೆ ನೀಡಿದೆ. ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥುಗಳು ಶೇ.97ರಷ್ಟು ಉತ್ತೀರ್ಣರಾಗಿರುತ್ತಾರೆ. ಈ ಪೈಕಿ ಶೇ.90ರಷ್ಟು ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇಂತಹ ವಿದ್ಯಾರ್ಥಿಗಳಿಗೆ ಗುಣಾತ್ಮಕ ಉನ್ನತ ಶಿಕ್ಷಣ ಒದಗಿಸಲು ಮೆಟ್ರಿಕ್ ನಂತರದ 100 ವಿದ್ಯಾರ್ಥಿನಿಯಲಗಳಲ್ಲಿ ಸಂಖ್ಯಾಬಲವನ್ನು 2,500ಕ್ಕೆ ಹೆಚ್ಚಿಸಲಾಗಿದೆ ಎಂದರು.

Karnataka Budget : ಅತಿಥಿ ಶಿಕ್ಷಕರಿಗೆ ಸಹಾಯಧನ 1,000 ರೂ. ಹೆಚ್ಚಳ – Vishwanews24

Leave a Reply