ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 15ನೇ ಬಜೆಟ್ ಮಂಡನೆ ಮಾಡುತ್ತಿದ್ದು, ರಾಜ್ಯದಲ್ಲಿನ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಹಾಗೂ ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂ. ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿನ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು ಹಾಗೂ ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಫ್ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು ಎಂದರು.
ಇನ್ನು ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.
ಇನ್ನು 100 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ತೆರೆಯಲಾಗುವುದು ಎಂದು ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…