ಇದೀಗ ಜಾನುವಾರುಗಳಿಗೆ ಹೆಚ್ಚು ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದೆ.
ಹೀಗಾಗಿ ಇದನ್ನ ತಡೆಗಟ್ಟುವ ಸಲುವಾಗಿ 1 ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ ನೀಡಲಾಗುವುದು ಎಂದರು. ಈ ಸೋಂಕಿನಿಂದಾಗಿ ಮರಣ ಹೊಂದಿದ ರಾಸುಗಳ ಮಾಲೀಕರಿಗೆ ಪರಿಹಾರವಾಗಿ 55 ಕೋಟಿ ರೂ. ಮಂಜೂರು ಮಾಡಲಾಗಿದೆ.
ಗ್ರಾಮೀಣ ವಿದ್ಯಾರ್ಥಿಗಳಿಗೆ ಹಳ್ಳಿ ಮುತ್ತು ಯೋಜನೆ, ಗ್ರಾಮೀಣಾ ಭಾಗದ ವಿದ್ಯಾರ್ಥಿಗಳಿಗಾಗಿ ಹಳ್ಳಿ ಮುತ್ತು ಯೋಜನೆ, ಗ್ರಾಮೀಣ ಸರ್ಕಾರಿ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸಹಾಯ, ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನೆರವು ನೀಡಲಾಗುವುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಂಪೂರ್ಣ ಶುಲ್ಕ 500 ಅತ್ಯುತ್ತಮ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.
ಕುಟುಂಬ ನಿರ್ವಹಣೆಯೊಂದಿಗೆ ಮನೆಯ ಆರ್ಥಿಕ ಸುಧಾರಣೆಗಾಗಿ ಶ್ರಮಿಸುವ ಮಹಿಳಾ ಕೃಷಿ ಕಾರಮಿಕರ ಕುರಿತು ನಮ್ಮ ಸರ್ಕಾರ ಹೊಂದಿರುವ ಕಾಳಜಿಯ ಪ್ರತೀಕವಾಗಿ, ಶ್ರಮ ಶಕ್ತಿ ಎಂಬ ಹೊಸ ಯೋಜನೆಯನ್ನು ಜಾರಿಗೆ ತಲಾಗುವುದು. ಈ ಯೋಜನೆಯಡಿ ರಾಜ್ಯ ಸರ್ಕಾರವು ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ ಗಳ ಸಹಾಯ ಧನವನ್ನು ಡಿಬಿಟಿ ಮೂಲಕ ನೀಡಲಾಗುತ್ತದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ರಾಜ್ಯದ 10.32 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯಡಿ 725 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. 2022-23ನೇ ಸಾಲಿನಲ್ಲಿ ಈ ಸೌಲಭ್ಯವನ್ನು ಭೂರಹಿತ ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರು ಹಾಗೂ ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿಸ್ತರಿಸಲಾಗಿದ್ದು, ಹೆಚ್ಚುವರಿಯಾಗಿ 3 ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ ರೂ. ಮೊತ್ತವನ್ನು ನೀಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯನ್ನು ರಾಜ್ಯದ ಸಿಂಪಿಗರ ಮಕ್ಕಳಿಗೂ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಸತಿ ಯೋಜನೆಗಳಲ್ಲಿ ಘಟಕ ಸಹಾಯಧನ 1.75 ಲಕ್ಷದಿಂದ 2 ಲಕ್ಷ ರೂಗಳಿಗೆ ಹೆಚ್ಚಳ ಮಾಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
2023-24 ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್‌ಯನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದಾರೆ. ಮಠ ಮತ್ತು ಮಂದಿರಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಅಭಿವೃದ್ಧಿ ಕೈಗೊಳ್ಳಲಾಗಿದೆ. ಈಗಾಗಲೇ ಮಠ-ಮಂದಿರಗಳ ಅಭಿವೃದ್ಧಿಗೆ ಬಜೆಟ್ನಲ್ಲಿ 1,000 ಕೋಟಿ ರೂ. ಹಣ ಮೀಸಲಿರಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮೊದಲ ಬಾರಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರು ಸ್ವಯಂಉದ್ಯೋಗ ಕೈಗೊಳ್ಳಲು ವಿದ್ಯುತ್ ಚಾಲಿತ ತ್ರಿಚಕ್ರ ಸರಕು ವಾಹನ ಖರೀದಿಗೆ 50 ಸಾವಿರ ರೂ. ಧನ ಸಹಾಯ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಮುಂದುವರೆಸಿ ಬಾಬು ಜಗಜೀವನರಾಮ್ ಸ್ವಯಂ ಉದ್ಯೋಗ ಯೋಜನೆಯಡಿಯಲ್ಲಿ ಎಲೆಕ್ರಿಕ್ ತಿಚಕ್ರ ಅಥವಾ ನಾಲ್ಕು ಚಕ್ರದ ಸರಕು ವಾಹನಗಳನ್ನು ಖರೀದಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ಫಲಾನುಭವಿಗಳಿಗೆ ಶೇ.50 ರಷ್ಟು 2 ಲಕ್ಷ ರೂ. ವರೆಗೂ ಸಹಾಯಧನವನ್ನು ನೀಡಲಾಗುವುದು, ಇದಕ್ಕಾಗಿ 400 ಕೋಟಿ ರೂ. ವೆಚ್ಚವಾಗಲಿದೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…