Karnataka Budget 2022 : ವಸತಿ ರಹಿತ ಮೀನುಗಾರರಿಗೆ 5 ಸಾವಿರ ಮನೆ , ಬಂದರು ಅಭಿವೃದ್ಧಿ, ಕಡಲು ವ್ಯಾಪಾರಕ್ಕೆ 1,880 ಕೋಟಿ ರೂ. ಮೀಸಲು – VIshwanews24
Karnataka Budget 2022 : ವಸತಿ ರಹಿತ ಮೀನುಗಾರರಿಗೆ 5 ಸಾವಿರ ಮನೆ , ಬಂದರು ಅಭಿವೃದ್ಧಿ, ಕಡಲು ವ್ಯಾಪಾರಕ್ಕೆ 1,880 ಕೋಟಿ ರೂ. ಮೀಸಲು – VIshwanews24
ಮೀನುಗಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪ್ರಸಕ್ತ ಸಾಲಿನಲ್ಲಿ 5 ಸಾವಿರ ವಸತಿ ರಹಿತ ಮೀನುಗಾರರಿಗೆ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಆದ್ಯತೆ ಮೇರೆಗೆ ಮನೆಗಳನ್ನು ನಿರ್ಮಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಬಂದರು ಅಭಿವೃದ್ಧಿ, ಕಡಲು ವ್ಯಾಪಾರಕ್ಕೆ ₹1,880 ಕೋಟಿ ಮೀಸಲಿಡಲಾಗುವುದು. 250 ಕೋಟಿರೂ ವೆಚ್ಚದಲ್ಲಿ ಅತ್ಯಾಧುನಿಕ ಮೀನುಗಾರಿಕಾ ಬಂದರು ನಿ್ರ್ಮಾಣ, ಉತ್ತರ ಕನ್ನಡ ಜಿಲ್ಲೆಯ ಮಾಜಾಳಿಯಲ್ಲಿ ಬಂದರು ನಿರ್ಮಾಣ, 350 ಕೋಟಿ ವೆಚ್ಚದಲ್ಲಿ ಮಂಗಳೂರು ಬಂದರು ವಿಸ್ತರಣೆ, ಕಾರವಾರದಲ್ಲಿ ಜಲಸಾರಿಗೆ, ಮೀನುಗಾರಿಕಾ ಸಂಸ್ಥೆ ಸ್ಥಾಪನೆ, ತದಡಿ-ಅಘನಾಶಿನಿ ಮಧ್ಯೆ ದೋಣಿ ಮಾರ್ಗ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ.