Karnataka Budget 2022 : ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ – Vishwanews24

Featured, ರಾಜ್ಯ ನ್ಯೂಸ್

Karnataka Budget 2022 : ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ

ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಉದ್ಯೋಗ ನೀಡಲಾಗುವುದು. ಆಯ್ದ ಸ್ವ-ಸಹಾಯ ಸಂಘಗಳಿಗೆ ತಲಾ 1.5 ಲಕ್ಷ ರೂ. ನೆರವು, 500 ಕೋಟಿ ರೂ. ಅನುದಾನ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಗುಂಪುಗಳಿಗೆ ವಿಶೇಷ ಆದ್ಯತೆ, 3.9 ಲಕ್ಷ ಮಹಿಳೆಯರಿಗೆ ಅನುಕೂಲ, ಮಹಿಳಾ ಸ್ವ-ಸಹಾಯ ಸಂಘಗಳಿಗೆ ವಾಣಿಜ್ಯ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲು ಏಕಗವಾಕ್ಷಿ ಸಾಲ ಸೌಲಭ್ಯ ವ್ಯವಸ್ಥೆ ಮಾಡಲಾಗುವುದು.

ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ ಬ್ರ್ಯಾಂಡಿಂಗ್, ಮೌಲ್ಯವರ್ಧನೆ, ಪ್ಯಾಕಿಂಗ್ ಸೌಲಭ್ಯ ಒದಗಿಸಿ, ಮಾರುಕಟ್ಟೆ ಒದಗಿಸಲು ಅಸ್ಮಿತೆ ಹೆಸರಿನಡಿ ಎಲ್ಲಾ ಉತ್ಪನ್ನಗಳ ಮಾರಾಟ, ಹೋಬಳಿ ಜಿಲ್ಲೆ ರಾಜ್ಯ ಮಟ್ಟದಲ್ಲಿ ಮಾರಾಟ ಮೇಳ ಆಯೋಜನೆ. ವೇತನ, ವಹಿವಾಟು, ಉದ್ಯೋಗ ಮತ್ತು ರಫ್ತು ಹೆಚ್ಚಳ ಗುರಿಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ ಚರ್ಮದ ಬೊಂಬೆ, ಧಾರವಾಡದಲ್ಲಿ ಕಸೂತಿ, ಕೊಪ್ಪಳದಲ್ಲಿ ಕೌದಿ ಮತ್ತು ಕಿನ್ಹಾಳ ಬೊಂಬೆ, ಮೈಸೂರಿನಲ್ಲಿ ಅಗರಬತ್ತಿ, ನವಲಗುಂದದಲ್ಲಿ ಜಮಖಾನಾ, ಚನ್ನಪಟ್ಟಣದಲ್ಲಿ ಆಟಿಕೆ ಹಾಗೂ ಇಳಕಲ್, ಗುಳೇದಗುಡ್ಡ, ಬೆಳಗಾವಿ – ಶಹಾಪುರ, ಶಿಡ್ಲಘಟ್ಟ ಮತ್ತು ಮೊಳಕಾಲ್ಮುರಿನಲ್ಲಿ ಸೀರೆ ಮೈಕ್ರೋ ಕ್ಲಸ್ಟರ್ ಅಭಿವೃದ್ದಿ ಮಾಡಲಾಗುವುದು ಎಂದು ಈ ಬಾರಿಯ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.

Karnataka Budget 2022 : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ 250 ಕೋಟಿ ರೂ. ಮೀಸಲು – Vishwanews24

Leave a Reply